ಆ್ಯಪ್ನಗರ

ಉಳ್ಳಾಲದಲ್ಲಿ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ!

ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ​ಕೆ.ಸಿ. ರೋಡ್ ಮುಳ್ಳುಗುಡ್ಡೆ ನಿವಾಸಿ ರಾಶಿಕ್ (22) ಬಂಧಿತ ಆರೋಪಿ.

Vijaya Karnataka Web 2 Dec 2021, 2:57 pm
ಉಳ್ಳಾಲ: ತಲಪಾಡಿ ಹಾಗೂ ಉಚ್ಚಿಲದಲ್ಲಿ ಶಾಲೆಗೆ ತೆರಳುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಸಿಸಿಬಿ ಮತ್ತು ಉಳ್ಳಾಲ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
Vijaya Karnataka Web ಆರೋಪಿ ಬಂಧನ


ಕೆ.ಸಿ. ರೋಡ್ ಮುಳ್ಳುಗುಡ್ಡೆ ನಿವಾಸಿ ರಾಶಿಕ್ (22) ಬಂಧಿತ ಆರೋಪಿ. ಬುಧವಾರ ಬೆಳಗ್ಗೆ ತಲಪಾಡಿ ಅಲಂಕಾರ ಗುಡ್ಡೆಯಿಂದ 14ರ ಶಾಲಾ ಬಾಲಕಿ ತನ್ನ ತಂಗಿಯೊಂದಿಗೆ ಒಳರಸ್ತೆಯಾಗಿ ತಲಪಾಡಿ ಚೆಕ್ ಪೋಸ್ಟ್ ರಸ್ತೆಯಾಗಿ ಕಾಲ್ನಡಿಗೆಯಲ್ಲಿ ಶಾಲೆಗೆ ತೆರಳುತ್ತಿದ್ದಾಗ ಸ್ಕೂಟರ್ ನಲ್ಲಿ ಬಂದ ರಾಶಿಕ್ ಬಾಲಕಿಯ ಕೈ ಹಿಡಿದು ಎಳೆದು ಅತ್ಯಾಚಾರಕ್ಕೆ ಯತ್ನಿಸಿದ್ದ.
ತಲಪಾಡಿ: ಶಾಲೆಗೆ ತೆರಳುತ್ತಿದ್ದ ಬಾಲಕಿಯ ಅತ್ಯಾಚಾರಕ್ಕೆ ಯತ್ನ; ಪ್ರತಿರೋಧಕ್ಕೆ ಬೆದರಿ ಪರಾರಿಯಾದ ಕಾಮುಕ
ಆ ಬಗ್ಗೆ ಸಂತ್ರಸ್ತ ಬಾಲಕಿಯು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಳು. ಅದಕ್ಕೂ ಸ್ವಲ್ಪ ಹೊತ್ತಿನ ಮೊದಲು ಆರೋಪಿ ರಾಶಿಕ್ ಉಚ್ಚಿಲದಲ್ಲೂ ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ತಡವಾಗಿ ಬೆಳಕಿಗೆ ಬಂದಿದ್ದು ಉಚ್ಚಿಲದ ಸಂತ್ರಸ್ತ ಬಾಲಕಿ ಗುರುವಾರ ಬೆಳಗ್ಗೆ ಉಳ್ಳಾಲ ಠಾಣೆಗೆ ತೆರಳಿ ದೂರು ನೀಡಿದ್ದಾಳೆ.
ಸ್ಲೀಪರ್‌ ಬಸ್‌ನಲ್ಲಿಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಮಂಗಳೂರಿನ ಅಪರಾಧಿಗೆ 7 ವರ್ಷ ಕಠಿಣ ಸಜೆ
ಸಿಸಿಟಿವಿ ಫೂಟೇಜ್ ಆಧಾರದಲ್ಲಿ ಉಳ್ಳಾಲ ಮತ್ತು ಮಂಗಳೂರು ಸಿಸಿಬಿ ಘಟಕದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಗುರುವಾರ ಬೆಳಗ್ಗೆ ರಾಶಿಕ್ ನನ್ನು ಬಂಧಿಸಿದ್ದಾರೆ. ತಲಪಾಡಿಯ ಸಂತ್ರಸ್ತೆ ಬಾಲಕಿ ನೀಡಿದ ದೂರಿನನ್ವಯ ಆರೋಪಿ ರಾಶಿಕ್ ವಿರುದ್ದ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಉಚ್ಚಿಲದ ಸಂತ್ರಸ್ತೆ ಬಾಲಕಿಯೂ ಆರೋಪಿ ವಿರುದ್ಧ ದೂರು ನೀಡಿದ್ದಾಳೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ