Please enable javascript.Sri Lanka Crisis: Dakshina Kannada Coastal Police On High Alert - ಶ್ರೀಲಂಕಾ ಪ್ರಜೆಗಳ ಅಕ್ರಮ ನುಸುಳುವಿಕೆ ಆತಂಕ: ಕರಾವಳಿ ತೀರದಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

ಶ್ರೀಲಂಕಾ ಪ್ರಜೆಗಳ ಅಕ್ರಮ ನುಸುಳುವಿಕೆ ಆತಂಕ: ಕರಾವಳಿ ತೀರದಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

Vijaya Karnataka Web 13 May 2022, 11:39 am
Subscribe

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತಾರಕಕ್ಕೇರಿದೆ. ಅಲ್ಲಿನ ಪ್ರತಿಭಟನೆ ಹೆಸರಿನಲ್ಲಿ ದೊಂಬಿ ಗಲಾಟೆಗಳು ನಡೆಯುತ್ತಿದೆ. ಈ ಹಿನ್ನೆಲೆ ಇದೀಗ ಶ್ರೀಲಂಕಾ ಪ್ರಜೆಗಳ ಅಕ್ರಮ ನುಸುಳುವಿಕೆ ಆತಂಕ ಕರ್ನಾಟಕದ ಕರಾವಳಿ ಭಾಗಕ್ಕೆ ಎದುರಾಗಿದ್ದು, ಈ ಹಿನ್ನೆಲೆ ದಕ್ಷಿಣ ಕನ್ನಡದ ಕರಾವಳಿ ತೀರ ಪ್ರದೇಶದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕರಾವಳಿ ಕಾವಲು ಪೊಲೀಸ್‌ ಪಡೆ ಸೂಚನೆ ನೀಡಿದೆ.

ಹೈಲೈಟ್ಸ್‌:

  • ಶ್ರೀಲಂಕಾ ಪ್ರಜೆಗಳ ಅಕ್ರಮ ನುಸುಳುವಿಕೆ ಆತಂಕ
  • ಕರಾವಳಿ ತೀರದಲ್ಲಿ ಕಟ್ಟೆಚ್ಚರಕ್ಕೆ ಸೂಚನೆ
  • ದ.ಕ ಜಿಲ್ಲೆಯ ಕರಾವಳಿಯಲ್ಲಿ ಹೈ ಅಲರ್ಟ್


download - 2022-05-13T112902.628
ಮಂಗಳೂರು : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಕಂಡ ಕಂಡಲ್ಲಿ ದೊಂಬಿಗಳು ನಡೆಯುತ್ತಿವೆ. ಅಲ್ಲಿ ಅರಾಜಕತೆ ಉಂಟಾಗಿ ಆಹಾರ ಪದಾರ್ಥಗಳಿಗೆ ಪರದಾಟ ನಡೆಯುತ್ತಿದ್ದು, ಈ ಕಾರಣದಿಂದ ಅಲ್ಲಿನ ಜನರು ಸಮುದ್ರ ಮಾರ್ಗದ ಮೂಲಕ ಭಾರತದತ್ತ ಬರುವ ಸಾಧ್ಯತೆಗಳು ಇರುವ ಹಿನ್ನೆಲೆಯಲ್ಲಿ ಕರಾವಳಿ ತೀರ ಪ್ರದೇಶದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕರಾವಳಿ ಕಾವಲು ಪೊಲೀಸ್‌ ಪಡೆ ಸೂಚನೆ ನೀಡಿದೆ.
ಸಮುದ್ರ ಮಾರ್ಗ ಅಥವಾ ಇನ್ನಿತರ ಮಾರ್ಗದ ಮೂಲಕ ಭಾರತಕ್ಕೆ ಆಗಮಿಸಿ, ಇಲ್ಲಿನ ಕರಾವಳಿ ಪ್ರದೇಶದಲ್ಲಿಅಕ್ರಮವಾಗಿ ನೆಲೆಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭ ಪೂರ್ವಾಪರ ವಿಚಾರಿಸಬೇಕು. ಸೂಕ್ತ ದಾಖಲಾತಿಗಳನ್ನು ಪಡೆದು ಪರಿಶೀಲನೆ ನಡೆಸಬೇಕು. ಯಾವುದೇ ವ್ಯಕ್ತಿಗಳ ಬಗ್ಗೆ ಸಂಶಯ ಬಂದಲ್ಲಿ ಸ್ಥಳೀಯ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು. ಲಂಕನ್ನರು ಅಕ್ರಮವಾಗಿ ಒಳನುಸುಳುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಕರಾವಳಿ ಕಾವಲು ಪೊಲೀಸ್‌ ಪಡೆಯ ವತಿಯಿಂದ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ.

ಮಂಗಳೂರು ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಅವರು ಸುದ್ದಿಗಾರರ ಜತೆ ಮಾತನಾಡಿ, ಶ್ರೀಲಂಕಾದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿಅಲ್ಲಿನ ಪ್ರಜೆಗಳು ಸಮುದ್ರದ ಮೂಲಕ ಕರಾವಳಿಗೆ ಬರುವ ಸಾಧ್ಯತೆ ಹೆಚ್ಚಿದೆ. ಕಳೆದ ವರ್ಷ ಅಕ್ರಮವಾಗಿ ನೆಲೆಸಿದ್ದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಪತ್ತೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಹೆಚ್ಚು ನಿಗಾ ವಹಿಸಿದೆ ಎಂದು ತಿಳಿಸಿದರು.

ಶ್ರೀಲಂಕಾ ಸರಕಾರದ ವಿರುದ್ಧ ಪ್ರತಿಪಕ್ಷದಿಂದ ಅವಿಶ್ವಾಸ ಮಂಡನೆ : ಸಂಕಷ್ಟಕ್ಕೆ ಸಿಲುಕಿದ ಮಹೀಂದ ರಾಜಪಕ್ಸೆ
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ