ಆ್ಯಪ್ನಗರ

ಸಾಲಮನ್ನಾ ದಾಖಲೆ ಸಂಗ್ರಹಕ್ಕೆ ತಂಡ ರಚನೆ

ರಾಜ್ಯ ಸರಕಾರದ ಒಂದು ಲಕ್ಷ ರೂ. ಸಾಲ ಮನ್ನಾ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂಬ ಉದ್ದೇಶದಿಂದ ಸೂಕ್ತ ದಾಖಲೆಗಳನ್ನು ಸಲ್ಲಿಸದ ರೈತರ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಸಂಗ್ರಹಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ತಂಡ ರಚಿಸಲಾಗಿದೆ.

Vijaya Karnataka 29 Jun 2019, 4:29 pm
ಮಂಗಳೂರು: ರಾಜ್ಯ ಸರಕಾರದ ಒಂದು ಲಕ್ಷ ರೂ. ಸಾಲ ಮನ್ನಾ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂಬ ಉದ್ದೇಶದಿಂದ ಸೂಕ್ತ ದಾಖಲೆಗಳನ್ನು ಸಲ್ಲಿಸದ ರೈತರ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಸಂಗ್ರಹಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ತಂಡ ರಚಿಸಲಾಗಿದೆ.
Vijaya Karnataka Web team to collect loav weaver recorf
ಸಾಲಮನ್ನಾ ದಾಖಲೆ ಸಂಗ್ರಹಕ್ಕೆ ತಂಡ ರಚನೆ


ಸಹಕಾರ ಇಲಾಖೆ ಅಧಿಕಾರಿಗಳು, ಎಸ್‌ಸಿಡಿಸಿಸಿ ಬ್ಯಾಂಕ್‌ ಅಧಿಕಾರಿಗಳು, ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಂಡದಲ್ಲಿದ್ದು ಪ್ರತಿ ರೈತರ ಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸಲಿದ್ದಾರೆ. ಆಧಾರ್‌ ಕಾರ್ಡ್‌, ರೇಶನ್‌ ಕಾರ್ಡ್‌, ಪಹಣಿ ಮತ್ತಿತರ ದಾಖಲೆಗಳನ್ನು ನೀಡಿ ರೈತರು ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ