ಆ್ಯಪ್ನಗರ

ಸೋದರನಿಂದ ಅತ್ಯಾಚಾರ, ಬಾಲಕಿ ಗರ್ಭಿಣಿ: ಆರೋಗ್ಯ ತಪಾಸಣೆ ವೇಳೆ ವಿಷಯ ಬಹಿರಂಗ

ಪೆರುವಾಯಿ ಗ್ರಾಮದ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ಬಾಲಕಿ ಸದ್ಯ ನಾಲ್ಕು ತಿಂಗಳ ಗರ್ಭಿಣಿ ಎಂಬ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

Vijaya Karnataka 9 Mar 2019, 2:18 pm
ವಿಟ್ಲ: ಶಾಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲು ಹೋದ ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿಯ ಮೂಲಕ ಅಪ್ರಾಪ್ರ ವಯಸ್ಸಿನ ಬಾಲಕಿಯೊಬ್ಬಳು ಗರ್ಭಿಣಿಯಾದ ವಿಚಾರ ಬೆಳಕಿಗೆ ಬಂದಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web rape


ಪೆರುವಾಯಿ ಗ್ರಾಮದ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ಬಾಲಕಿ ಸದ್ಯ ನಾಲ್ಕು ತಿಂಗಳ ಗರ್ಭಿಣಿ ಎಂಬ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ಪೆರುವಾಯಿ ಆರೋಗ್ಯ ಕೇಂದ್ರದ ವತಿಯಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸುವ ವೇಳೆ ಒಬ್ಬ ಬಾಲಕಿ ವಿಭಿನ್ನವಾಗಿದ್ದಳು. ಇದರಿಂದ ಅನುಮಾನಕ್ಕೊಳಗಾದ ಆರೋಗ್ಯ ಕೇಂದ್ರದ ದಾದಿ ಮಂಗಳೂರು ಲೇಡಿಗೋಷನ್‌ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲು ಸೂಚಿಸಿದ್ದಾರೆ.

ಸೂಚನೆಯಂತೆ ಮಂಗಳೂರಿನಲ್ಲಿ ತಪಾಸಣೆ ನಡೆಸುವ ಸಂದರ್ಭ ಆ ಬಾಲಕಿ ನಾಲ್ಕು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ತಕ್ಷ ಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಲಕಿಯ ವಿಚಾರಣೆ ನಡೆಸಿದಾಗ ಆಕೆಯ ಸಹೋದರನಿಂದಲೇ ವರ್ಷದಿಂದ ನಿರಂತರ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. 17 ವರ್ಷದ ಬಾಲಕನನ್ನು ವಶಕ್ಕೆ ಪಡೆದುಕೊಂಡು ಬಾಲನ್ಯಾಯ ಮಂಡಳಿಯ ಪಾಲನಾ ಕೇಂದ್ರಕ್ಕೆ ಕಳುಹಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ