ಆ್ಯಪ್ನಗರ

ದೇವಾಲಯಗಳ ಅರ್ಚಕರಿಗೆ ವಿಮೆ ಸೌಲಭ್ಯಕ್ಕೆ ಸೂಚನೆ! ಕೋಟ ಶ್ರೀನಿವಾಸ ಪೂಜಾರಿ!

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಅರ್ಚಕರು, ಡಿ ದರ್ಜೆ ನೌಕರರು ಮತ್ತು ಅಲ್ಲಿರುವ ಓಲಗದವರಿಗೆ ವಿಮಾ ಸೌಲಭ್ಯ ಕಲ್ಪಿಸಲು ಯೋಜನೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Vijaya Karnataka Web 25 Jul 2020, 8:15 pm
ಮಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಅರ್ಚಕರು, ಡಿ ದರ್ಜೆ ನೌಕರರು ಮತ್ತು ಅಲ್ಲಿರುವ ಓಲಗದವರಿಗೆ ವಿಮಾ ಸೌಲಭ್ಯ ಕಲ್ಪಿಸಲು ಯೋಜನೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Vijaya Karnataka Web kota srinivas poojary


ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಅರ್ಚಕರ ಮನವಿಗೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಮತ್ತು 10 ಲಕ್ಷ ರೂ. ಮೊತ್ತದ ಜೀವ ವಿಮೆ ನೀಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. 34 ಸಾವಿರ ದೇವಸ್ಥಾನಗಳಲ್ಲಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಅರ್ಚಕರು ಮತ್ತು ಸಿಬ್ಬಂದಿ ಇದ್ದಾರೆ. ಇಲಾಖೆ ಹೊರತಾದ ದೇವಳಗಳಿಂದ ಮನವಿ ಬಂದರೂ ಪರಿಗಣಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರವಾಗಿ ಅವರು ಹೇಳಿದರು.

ಕೇಂದ್ರ ಸರಕಾರದ ಜೀವನ್‌ ಜ್ಯೋತಿ, ಸುರಕ್ಷಾ ಜ್ಯೋತಿ ಮತ್ತು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಪರ್ಸನಲ್‌ ಆ್ಯಕ್ಸಿಡೆಂಟ್‌ ವಿಮೆ ಮಾದರಿಯಲ್ಲಿ ವಿಮಾ ಸೌಲಭ್ಯ ಮಾಡುವ ಚಿಂತನೆ ಇದೆ. ಅಧಿಕಾರಿಗಳು ಪ್ರಸ್ತಾಪ ಮಂಡಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಬಜೆಟ್‌ ಹೊಂದಾಣಿಕೆ ಬಗ್ಗೆ ಯೋಚನೆ ನಡೆಸಲಾಗುವುದು ಎಂದರು.

ಕೊರೊನಾ ಸೋಂಕಿತರಿಗೆ ವರದಾನವಾದ ಪ್ಲಾಸ್ಮಾ ಥೆರಪಿ! ಪ್ಲಾಸ್ಮಾ ದಾನ ಮಾಡುವುದು ಹೇಗೆ?

ಸಪ್ತಪದಿ ಯೋಜನೆ ಕೈ ಬಿಟ್ಟಿಲ್ಲ. ಈ ಬಗ್ಗೆ ಸಚಿವ ಸುರೇಶ್‌ ಕುಮಾರ್‌ ಅವರಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು. ಉಳ್ಳಾಲದಿಂದ ಕಾರವಾರ ತನಕ ಕಡಲ್ಕೊರೆತವಾಗುತ್ತಿದ್ದು, ಜನರಿಗೆ ಸಮಸ್ಯೆಯಾಗದಂತೆ ತಾತ್ಕಾಲಿಕ ಕಲ್ಲು ಹಾಕುವ ಕಾಮಗಾರಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ