ಆ್ಯಪ್ನಗರ

ಅಕ್ಕ ಮತ್ತು ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ; ಬೆಳ್ತಂಗಡಿಯ ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ

ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರಾದ ಸಾವಿತ್ರಿ ವಿ.ಭಟ್‌ ವಿಚಾರಣೆ ನಡೆಸಿ ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಅತ್ಯಾಚಾರ ಅಪರಾಧಕ್ಕೆ 7 ವರ್ಷ ಕಠಿಣ ಸಜೆ ಮತ್ತು 5ಸಾವಿರ ರೂ. ದಂಡ ಹಾಗೂ ಪೊಕ್ಸೋ ಕಾಯಿದೆಯಡಿ 10ವರ್ಷ ಕಠಿಣ ಸಜೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಸೆ.9ರಂದು ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್‌ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೊಕ್ಸೋ) ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದಾರೆ.

Vijaya Karnataka 15 Sep 2021, 11:18 am
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ (ಪೊಕ್ಸೋ) ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯ ಕಠಿಣ ಸಜೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
Vijaya Karnataka Web Sixth accused in Mysuru rape case held in Tamil Nadu town


ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ 2019ರ ಜೂ.27 ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್‌ (27) ಎಂಬ ಕಾಮುಕ ನಡೆಸಿದ ಅತ್ಯಾಚಾರದಿಂದ ಬಾಲಕಿ ಗರ್ಭಿಣಿಯಾಗಿದ್ದು, ಬಳಿಕ ಗರ್ಭಪಾತವಾಗಿತ್ತು. ಪ್ರಕರಣದ ಬಗ್ಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರಾದ ಸಾವಿತ್ರಿ ವಿ.ಭಟ್‌ ವಿಚಾರಣೆ ನಡೆಸಿ ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಅತ್ಯಾಚಾರ ಅಪರಾಧಕ್ಕೆ 7 ವರ್ಷ ಕಠಿಣ ಸಜೆ ಮತ್ತು 5ಸಾವಿರ ರೂ. ದಂಡ ಹಾಗೂ ಪೊಕ್ಸೋ ಕಾಯಿದೆಯಡಿ 10ವರ್ಷ ಕಠಿಣ ಸಜೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಸೆ.9ರಂದು ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್‌ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೊಕ್ಸೋ) ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದಾರೆ.
ಲೈಂಗಿಕ ದೌರ್ಜನ್ಯ ನೀಡಿದ ಕಾಮುಕ; ಮನನೊಂದ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ!
ಎರಡನೇ ಬಾರಿ ಕೃತ್ಯ: ಅಪರಾಧಿ ನವೀನ್‌ ಈ ಹಿಂದೆ 2017ರಲ್ಲಿ ಈ ಪ್ರಕರಣದ ಸಂತ್ರಸ್ತೆಯ ಅಕ್ಕನ ಮೇಲೆ ಅತ್ಯಾಚಾರವೆಸಗಿದ್ದು, ಅದರಲ್ಲೂ ಯುವತಿ ಗರ್ಭವತಿಯಾಗಿದ್ದಳು. ಬಂಧಿಸಲ್ಪಟ್ಟಿದ್ದ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಆ ವೇಳೆ ಯುವತಿ ವಯಸ್ಕಳಾದಾಗ ಆತನನ್ನೇ ವಿವಾಹವಾಗಿದ್ದ. ವಿವಾಹವಾದ ಅನಂತರ ಆಕೆಯ ತಂಗಿ ಅಪ್ರಾಪ್ತ ಬಾಲಕಿಯ ಮೇಲೆಯೂ ಹಲವು ಬಾರಿ ಅತ್ಯಾಚಾರವೆಸಗಿದ್ದ. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಆ ಪ್ರಕರಣದ ಶಿಕ್ಷೆ ಅನುಭವಿಸುತ್ತಿರುವಂತೆಯೇ ಆತನ ವಿರುದ್ಧದ ಮತ್ತೊಂದು ಅತ್ಯಾಚಾರ (ಪೊಕ್ಸೋ) ಪ್ರಕರಣದ ತೀರ್ಪು ಕೂಡ ಹೊರಬಿದ್ದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ