ಆ್ಯಪ್ನಗರ

ಗೋಲಿಬಾರ್‌ಗೆ ಬಲಿಯಾದವರ ಕುಟುಂಬಕ್ಕೆ ಟಿಎಂಸಿ ನಾಯಕರಿಂದ ಪರಿಹಾರ ವಿತರಣೆ

ಮಾಜಿ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಹಾಗೂ ರಾಜ್ಯಸಭಾ ಸದಸ್ಯ ನದಿಮುಲ್ ಹಕ್ ಶನಿವಾರ ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬಳಿಕ ನೇರವಾಗಿ ಮೃತರ ಮನೆಗೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿ ಪರಿಹಾರದ ಚೆಕ್ ವಿತರಿಸಿದರು.

Vijaya Karnataka 28 Dec 2019, 12:52 pm

ಮಂಗಳೂರು: ಮಂಗಳೂರಿನಲ್ಲಿ ಡಿ. 19 ರಂದು ನಡೆದ ಗೋಲಿಬಾರ್‌ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಪರಿಹಾರದ ಮೊತ್ತವನ್ನು ಕುಟುಂಬಕ್ಕೆ ಹಸ್ತಾಂತರಿಸಲು ತೃಣಮೂಲ ಕಾಂಗ್ರೆಸ್‌ನ ಇಬ್ಬರು ನಾಯಕರು ಶನಿವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಿ ಕುಟುಂಬಕ್ಕೆ ಚೆಕ್ ನೀಡಿದ್ದಾರೆ.
Vijaya Karnataka Web Mangaluru Golibar TMC


ಮಾಜಿ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಹಾಗೂ ರಾಜ್ಯಸಭಾ ಸದಸ್ಯ ನದಿಮುಲ್ ಹಕ್ ಶನಿವಾರ ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬಳಿಕ ನೇರವಾಗಿ ಮೃತರ ಮನೆಗೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿ ಪರಿಹಾರದ ಚೆಕ್ ವಿತರಿಸಿದರು.

ಈ ಸಂದರ್ಭ ಮಾತನಾಡಿದ ದಿನೇಶ್ ತ್ರಿವೇದಿ, “ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆ ಸಂದರ್ಭ ಗೋಲಿಬಾರ್ ನಡೆಸಿ ಇಬ್ಬರು ಮೃತಪಟ್ಟಿರುವುದು ಅತ್ಯಂತ ಬೇಸರದ ಸಂಗತಿ. ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಮಾನವೀಯ ನೆಲೆಯಲ್ಲಿ ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಪರಿಹಾರ ಘೋಷಿಸಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಪೌರತ್ವ ಕಾಯಿದೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಉತ್ತರ ಪ್ರದೇಶ ಹಾಗೂ ಮಂಗಳೂರಿನಲ್ಲಿ ಬಿಟ್ಟರೆ ಬೇರೆಲ್ಲೂ ಇಂಥಹ ಘಟನೆಗಳು ನಡೆದಿಲ್ಲ,” ಎಂದು ತಿಳಿಸಿದರು.

ಮಂಗಳೂರು ಗೋಲಿಬಾರ್‌ ಪ್ರಕರಣ, ತನಿಖೆ ಆರಂಭಿಸಿದ ಸಿಐಡಿ ತಂಡ

ಮಂಗಳೂರು ಶಾಸಕ ಯುಟಿ ಖಾದರ್ ಹಾಗೂ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಜೊತೆಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ