ಆ್ಯಪ್ನಗರ

ಗೋಡೆ ಕುಸಿದು ಮಹಿಳೆ ಸಾವು

ಪಾಲಡ್ಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಡಂದಲೆಯಲ್ಲಿ ು ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಟ್ಟಡ ು ಭಾನುವಾರ ಬೆಳಗ್ಗೆ ಕುಸಿದು ಬಿದ್ದಿದ್ದು ಕಟ್ಟಡದೊಳಗಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Vijaya Karnataka 19 Aug 2019, 4:15 pm
ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಡಂದಲೆಯಲ್ಲಿ ು ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಟ್ಟಡ ು ಭಾನುವಾರ ಬೆಳಗ್ಗೆ ಕುಸಿದು ಬಿದ್ದಿದ್ದು ಕಟ್ಟಡದೊಳಗಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Vijaya Karnataka Web wall collapsed lady died
ಗೋಡೆ ಕುಸಿದು ಮಹಿಳೆ ಸಾವು


ಕಡಂದಲೆಯ ಮೀನಾಕ್ಷಿ ಗೌಡ(63)ಮೃತ ಮಹಿಳೆ. ತಾಯಿ ಮಗನ ಮಧ್ಯೆ ಮನಸ್ತಾಪ ಉಂಟಾಗಿದ್ದು ಕೆಲವು ದಿನಗಳಿಂದ ಮೀನಾಕ್ಷಿ ಕಡಂದಲೆ ಬಿ,ಟಿ ನಗರದಲ್ಲಿರುವ ಸುಬ್ರಹ್ಮಣ್ಯ ಸ್ವಾಮಿ ಶಾಲೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿ ಆಶ್ರಯ ಪಡೆದಿದ್ದರು. ಕೆಲವು ದಿನಗಳಿಂದ ಇಲ್ಲಿ ಮಳೆ ಸುರಿದು ಕಟ್ಟಡದ ಗೋಡೆ ಬಿರುಕುಬಿಟ್ಟು ಅಪಾಯಕಾರಿ ಸ್ಥಿತಿಯಲ್ಲಿತ್ತು. ಭಾನುವಾರ ಬೆಳಗ್ಗೆ ಮಳೆ ಬಿದ್ದ ಸಂದರ್ಭ ಕಟ್ಟಡದ ಗೋಡೆ ಹಾಗೂ ಮೇಲ್ಚಾವಣಿ ಕುಸಿದು ಮಹಿಳೆ ಮೇಲೆ ಬಿದ್ದು ಅವರು ಸಾವನಪ್ಪಿದ್ದಾರೆ. ಶಾಸಕ ಉಮಾನಾಥ ಕೋಟ್ಯಾನ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೂಡುಬಿದಿರೆ ಎಸ್‌ಐ ದೇಜಪ್ಪ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ