ಆ್ಯಪ್ನಗರ

ಪೊಲೀಸ್‌ ಅಧಿಕಾರಿಗಳು, ರಾಜಕೀಯ ನಾಯಕರಿಂದ ಹಣ ಸುಲಿಗೆ: ವಾಟ್ಸಾಪ್‌ ಗ್ರೂಪ್‌ ಅಡ್ಮಿನ್‌ ಸೆರೆ

ಮಂಗಳೂರು ಪೊಲೀಸ್‌ ಅಧಿಕಾರಿಗಳು, ಮಾಧ್ಯಮದವರ ಹಾಗೂ ರಾಜಕೀಯ ವ್ಯಕ್ತಿಗಳ ಹೆಸರು ಹೇಳಿ ದುರುಪಯೋಗ ಪಡಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

Vijaya Karnataka Web 14 May 2020, 12:49 pm
ಮಂಗಳೂರು: ಪೊಲೀಸ್‌ ಅಧಿಕಾರಿಗಳು, ಮಾಧ್ಯಮದವರ ಹಾಗೂ ರಾಜಕೀಯ ವ್ಯಕ್ತಿಗಳ ಹೆಸರು ಹೇಳಿ ದುರುಪಯೋಗ ಪಡಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಕನಕ ವಾಟ್ಸಾಪ್‌ ಗ್ರೂಪ್‌ ಅಡ್ಮಿನ್‌ ಬೆಳ್ತಂಗಡಿ ಪುತ್ತಿಲ ಗ್ರಾಮದ ನಿವಾಸಿ ರಶೀದ್‌ ಕುಂಡಡ್ಕ ಯಾನೆ ಅಬ್ದುಲ್‌ ರಶೀದ್‌ (39) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
Vijaya Karnataka Web ವಾಟ್ಸಾಪ್‌
ವಾಟ್ಸಾಪ್‌


ಕುಖ್ಯಾತ ರೌಡಿ ಹಾಗೂ ಜುವೆಲ್ಲರಿ ದರೋಡೆ ಪ್ರಕರಣವೊಂದರಲ್ಲಿನ ಪ್ರಮುಖ ಆರೋಪಿ ಮುತ್ತಾಸಿಮ್‌ ಯಾನೆ ತಸ್ಲಿಂ ಎಂಬಾತನ ಕೊಲೆ ಪ್ರಕರಣದಲ್ಲಿರುವ ವ್ಯಕ್ತಿಯೊಬ್ಬನ ಹೆಸರನ್ನು ಪ್ರಕರಣದಿಂದ ತೆಗೆಸುತ್ತೇನೆ, ತನಗೆ ಪೊಲೀಸ್‌ ಅಧಿಕಾರಿಗಳ ಪರಿಚಯವಿದೆ ಎಂದು ಹೇಳಿ 20 ಲಕ್ಷ ರೂ.ಹಣವನ್ನು ನೀಡುವಂತೆ ಬೇಡಿಕೆಯಿಟ್ಟು, ನಂತರ 4 ಲಕ್ಷ ರೂ. ಹಣವನ್ನು ಸುಲಿಗೆ ಮಾಡಿದ್ದ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.

ಆರೋಪಿ ಕನಕ ಎಂಬ ವಾಟ್ಸ್ಯಾಪ್‌ ಗ್ರೂಪ್‌ನ ಅಡ್ಮಿನ್‌ ಮಾಡಿದ್ದು, ಈ ವಾಟ್ಸಪ್‌ ಗ್ರೂಪ್‌ನಲ್ಲಿ ಸರಕಾರಿ ಅಧಿಕಾರಿಗಳನ್ನು, ರಾಜಕೀಯ ವ್ಯಕ್ತಿ, ಮಾಧ್ಯಮದವರನ್ನು ಸೇರಿಸಿಕೊಂಡು ನಂತರ ತನ್ನ ವಾಟ್ಸ್ಯಾಪ್‌ ಗ್ರೂಪ್‌ ನ ಹೆಸರನ್ನು ನಮೂದಿಸಿ ಕರೆ ಮಾಡಿ ತನ್ನ ಪರಿಚಯವನ್ನು ಮಾಡಿಕೊಂಡು, ಆ ಪರಿಚಯವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಗೆ ನಂಬಿಸಿ ಹಣವನ್ನು ಸುಲಿಗೆ ಮಾಡುತ್ತಿದ್ದ. ಈತನ ವಿರುದ್ಧ ಈ ಹಿಂದೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ ರೌಡಿ ಶೀಟರ್‌ ಆಗಿದ್ದಾನೆ.

ಸಿಸಿಬಿ ಘಟಕದ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌ ಆರ್‌. ನಾಯ್ಕ, ಪಿಎಸ್‌ಐ ಎಚ್‌.ಡಿ. ಕಬ್ಬಾಳ್‌ರಾಜ್‌ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ