ಆ್ಯಪ್ನಗರ

ಗಡಿ ಭಾಗದ ರಸ್ತೆಗಳ ಮಣ್ಣು ತೆರವಿಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಿ ಕ್ರಮ: ಕೋಟ ಶ್ರೀನಿವಾಸ ಪೂಜಾರಿ

ಕೊರೊನಾ ಲಾಕ್‌ ಡೌನ್‌ ಸಂದರ್ಭದಲ್ಲಿ ಗಡಿಭಾಗದಲ್ಲಿ ಹಾಕಲಾಗಿರುವ ಮಣ್ಣುಗಳ ತೆರವು ಮಾಡುವ ಕುರಿತು ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Vijaya Karnataka Web 1 Aug 2020, 8:25 pm
ಸುಳ್ಯ: ಕೊರೊನಾ ಲಾಕ್‌ ಡೌನ್‌ ಸಂದರ್ಭದಲ್ಲಿ ಗಡಿಭಾಗದಲ್ಲಿ ಹಾಕಲಾಗಿರುವ ಮಣ್ಣುಗಳ ತೆರವು ಮಾಡುವ ಕುರಿತು ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Vijaya Karnataka Web kota srinivas poojary


ಸುಳ್ಯದಲ್ಲಿ ಸುದ್ದಿಗಾರ ಜತೆ ಮಾತನಾಡಿದ ಕೇರಳ ಮತ್ತು ಕರ್ನಾಟಕದ ಗಡಿಭಾಗದಲ್ಲಿ ಕೆಲವೆಡೆ ಹಾಕಲಾಗಿದ್ದ ಮಣ್ಣುಗಳನ್ನು ತೆರವು ಮಾಡಲಾಗಿದೆ. ಇನ್ನೂ ಕೆಲವು ಭಾಗದಲ್ಲಿ ಇದೆ. ಆ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾಸರಗೋಡು ಜಿಲ್ಲಾಧಿಕಾರಿಗಳ ಜತೆಗೆ ಚರ್ಚಿಸಿ ತಕ್ಷಣ ತೆರವುಗೊಳಿಸಲು ತಿಳಿಸಲಾಗಿದೆ. ಒಂದೆರಡು ದಿನಗಳಲ್ಲಿ ಅಂತಾರಾಜ್ಯ ಗಡಿ ಸಮಸ್ಯೆ ಬಗೆಹರಿಯಲಿದೆ ಎಂದರು.

ರಾಜ್ಯ 86 ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆಗೆ ಚರ್ಚೆಗೆ ಬಂದಿದೆ. ಕೆಲವು ದೇವಾಲಯಗಳಿಗೆ ಅನುಮೋದನೆ ನೀಡಲಾಗಿದೆ. 15 ದಿನಗಳಲ್ಲಿ ನೇಮಕ ಪ್ರಕ್ರಿಯೆ ಶೀಘ್ರವಾಗಿ ನಡೆಸಲಾಗುವುದು.

ರಾಜ್ಯದಲ್ಲಿ ಏರುತ್ತಲೇ ಇದೆ ಕೊರೊನಾ ಸಂಖ್ಯೆ: ಗುಣವಾಗುವ ಪ್ರಮಾಣದಲ್ಲೂ ಹೆಚ್ಚಳ!

ಶಾಸಕ ಅಂಗಾರರು ಹಿರಿಯ ಶಾಸಕರು. ಅವರಿಗೆ ನಿಗಮದಲ್ಲಿ ಸ್ಥಾನ ನೀಡಿಲ್ಲವೆಂದಾದರೆ ಸೂಕ್ತ ವಾದ ದೊಡ್ಡ ಮಟ್ಟದ ಗೌರವ ಸಿಗಬಹುದು. ಮಂತ್ರಿ ಮಂಡಲ ವಿಸ್ತರಣೆ, ಪುನರ್‌ ರಚನೆ ಮುಖ್ಯಮಂತ್ರಿ ಗಳು ನಿರ್ಧರಿಸುತ್ತಾರೆ ಎಂದು ಹೇಳಿದರು. ಸುಳ್ಯ ಶಾಸಕ ಎಸ್‌.ಅಂಗಾರ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್‌ ಕಂಜಿಪಿಲಿ ಹಾಗೂ ಬಿಜೆಪಿ ಪ್ರಮುಖರು ಜತೆಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ