ಆ್ಯಪ್ನಗರ

ಮಹಾರಾಷ್ಟ್ರ: ಬಹುಮಹಡಿ ಕಟ್ಟಡ ಕುಸಿತ; ಇಬ್ಬರು ಸಾವು, ಅವಶೇಷಗಳಡಿ 18 ಮಂದಿ!

ಕಾರ್ಯಾಚರಣೆ ಮುಂಜಾನೆಯಿಂದ ಮತ್ತೆ ಆರಂಭವಾಗಿದ್ದು ಘಟನೆಯಲ್ಲಿ ಒಟ್ಟು ಇಬ್ಬರು ಸಾವನಪ್ಪಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅಲ್ಲದೆ 10 ವರ್ಷದ ಮಗು ಸೇರಿ 18 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

Agencies 25 Aug 2020, 9:31 am
ನವೀ ಮುಂಬಯಿ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಹಿನ್ನೆಲೆ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸೋಮವಾರ ತಡ ರಾತ್ರಿ ಈ ಘಟನೆ ನಡೆದಿದ್ದು ತಕ್ಷಣ ಎನ್‌ಡಿಆರ್‌ಎಫ್‌ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಹಲವರನ್ನ ರಕ್ಷಿಸಿದ್ದರು.
Vijaya Karnataka Web EgO59V9UMAE_b2I


ಸದ್ಯ ಕಾರ್ಯಾಚರಣೆ ಮುಂಜಾನೆಯಿಂದ ಮತ್ತೆ ಆರಂಭವಾಗಿದ್ದು ಘಟನೆಯಲ್ಲಿ ಒಟ್ಟು ಇಬ್ಬರು ಸಾವನಪ್ಪಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅಲ್ಲದೆ 10 ವರ್ಷದ ಮಗು ಸೇರಿ 18 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿ ಎನ್‌ಡಿಆರ್‌ಎಫ್‌ ತಂಡ ಒಟ್ಟು 24 ಮಂದಿಯನ್ನ ರಕ್ಷಿಸಿತ್ತು, ಇವರೆನ್ನೆಲ್ಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಹಲವರು ಗಂಭೀರ ಗಾಯಗೊಂಡಿದ್ದು ಅವರಿಗೆ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾರಾಷ್ಟ್ರ: ಬಹುಮಹಡಿ ಕಟ್ಟಡ ಕುಸಿತ, ಒಂದು ಸಾವು, 70ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿದ ಶಂಕೆ

45 ಫ್ಲ್ಯಾಟ್ ಗಳಿರುವ ಐದು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಇದಕ್ಕೆ ಕಾರಣ ಏನು ಎಂದು ಇದುವರೆಗೆ ತಿಳಿದುಬಂದಿಲ್ಲ. ಇನ್ನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಜಿಲ್ಲಾಡಳಿತದೊಂದಿಗೆ ಮಾತುಕತೆ ನಡೆಸಿದ್ದು ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಘಟನೆ ಸಂಬಂಧ ತನಿಖೆ ಆರಂಭವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ