ಆ್ಯಪ್ನಗರ

Vande Bharat: ಎಮ್ಮೆಗಳ ಹಿಂಡಿಗೆ ಡಿಕ್ಕಿ: ಹೊಸದಾಗಿ ಆರಂಭವಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ಹಾನಿ

Vande Bharat Express: ಇತ್ತೀಚೆಗಷ್ಟೇ ಆರಂಭವಾಗಿದ್ದ ಗಾಂಧಿನಗರ- ಮುಂಬಯಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, ಎಮ್ಮೆ ಹಿಂಡಿಗೆ ಡಿಕ್ಕಿಯಾಗಿದೆ. ರೈಲಿನ ಎಂಜಿನ್ ಮುಂಭಾಗ ಕಿತ್ತುಬಂದಿದೆ. ಅದೃಷ್ಟವಶಾತ್ ಹೆಚ್ಚಿನ ಅಪಾಯ ಉಂಟಾಗಿಲ್ಲ.

Edited byಅಮಿತ್ ಎಂ.ಎಸ್ | Vijaya Karnataka Web 6 Oct 2022, 4:09 pm

ಹೈಲೈಟ್ಸ್‌:

  • ಗಾಂಧಿನಗರ- ಮುಂಬಯಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು
  • ಹಳಿ ದಾಟುತ್ತಿದ್ದ ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದ ರೈಲು
  • ರೈಲಿನ ಮುಂಭಾಗಕ್ಕೆ ಸ್ವಲ್ಪ ಹಾನಿ, ಸಂಚಾರ ಮರು ಆರಂಭ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Vande Bharat express
ಮುಂಬಯಿ: ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆ ಪರಿಣಾಮ ವಂದೇ ಭಾರತ್ ರೈಲಿನ ಮುಂದಿ ಭಾಗ ಜಖಂಗೊಂಡ ಘಟನೆ ಗುಜರಾತ್‌ನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೆಮಿ- ಹೈಸ್ಪೀಡ್ ರೈಲಿಗೆ ಚಾಲನೆ ನೀಡಿದ ಕೆಲವೇ ದಿನಗಳಲ್ಲಿ ಈ ಘಟನೆ ಸಂಭವಿಸಿದೆ.
ಮುಂಬಯಿಯಿಂದ ಗಾಂಧಿನಗರಕ್ಕೆ ರೈಲು ತೆರಳುತ್ತಿತ್ತು. ಅಹಮದಾಬಾದ್‌ಗೂ ಮುನ್ನ ಬಟ್ವಾ ಮತ್ತು ಮಾನಿನಗರ ಮಧ್ಯೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
Vande Bharat Express: ಗಾಂಧಿನಗರ ಮುಂಬೈ ನಡುವಣ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಅಪಘಾತದಲ್ಲಿ ರೈಲಿನ ಮುಂದಿನ ಭಾಗಕ್ಕೆ ಸ್ವಲ್ಪ ಹಾನಿಯಾಗಿದೆ. ಘಟನೆ ಬಳಿಕ ರೈಲಿನ ಒಡೆದ ಮುಂಭಾಗವನ್ನು ಸಿಬ್ಬಂದಿಯೊಬ್ಬರು ತೆರವುಗೊಳಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಹಳಿಗಳಲ್ಲಿನ ಅಡತಡೆಗಳನ್ನು ತೆರವುಗೊಳಿಸಿದ ಬಳಿಕ 20 ನಿಮಿಷಗಳಲ್ಲಿ ರೈಲು ಸಂಚಾರ ಮತ್ತೆ ಆರಂಭವಾಗಿದೆ.

ವಟ್ವಾ ಸ್ಟೇಷನ್ ಸಮೀಪ ಎಮ್ಮೆಗಳ ಹಿಂಡೊಂದು ರೈಲ್ವೆ ಹಳಿ ದಾಟುತ್ತಿದ್ದಾಗ, ವೇಗವಾಗಿ ಬಂದ ರೈಲು ಅವುಗಳಿಗೆ ಡಿಕ್ಕಿಯಾಗಿದೆ ಎಂದು ಪಶ್ಚಿಮ ರೈಲ್ವೆಯ ಹಿರಿಯ ಪಿಆರ್‌ಒ ಜೆಕೆ ಜಯಂತ್ ತಿಳಿಸಿದ್ದಾರೆ. ರೈಲಿನ ಎಂಜಿನ್‌ನ ಮುಂಭಾಗಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.
ಮುಂದಿನ ವರ್ಷ ಬೆಂಗಳೂರು - ಹುಬ್ಬಳ್ಳಿ ನಡುವೆ ವಂದೇ ಭಾರತ್ ಹೈಸ್ಪೀಡ್ ಎಕ್ಸ್ ಪ್ರೆಸ್ ರೈಲು

ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ- ಮುಂಬಯಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸೆಮಿ- ಹೈ ಸ್ಪೀಡ್ ರೈಲನ್ನು ಕಳೆದ ತಿಂಗಳು ಉದ್ಘಾಟಿಸಿದ್ದರು. ಗಾಂಧಿನಗರದಿಂದ ಅಹಮದಾಬಾದ್‌ನ ಕಾಲುಪುರ್ ರೈಲ್ವೆ ನಿಲ್ದಾಣದವರೆಗೂ ಅದರಲ್ಲಿ ಪ್ರಯಾಣಿಸಿದ್ದರು.

ಪಶ್ಚಿಮ ರೈಲ್ವೆ ವಲಯವು ಅಕ್ಟೋಬರ್ 5ರಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣ ಸಮಯವನ್ನು ಮತ್ತಷ್ಟು ತಗ್ಗಿಸಿದೆ. ಗಾಂಧಿನಗರದಿಂದ ಮುಂಬಯಿ ಸೆಂಟ್ರಲ್‌ಗೆ ರೈಲು 20 ನಿಮಿಷ ಮುಂಚಿತವಾಗಿ ಬರಲಿದೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ