ಆ್ಯಪ್ನಗರ

ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ವಿಕ ಸುದ್ದಿಲೋಕ, ಮೈಸೂರು ಡಿವೈಎಸ್ಪಿ ಎಂಕೆ...

Vijaya Karnataka Web 11 Jul 2016, 9:00 am

ಮೈಸೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ನಗರದ ನ್ಯಾಯಾಲಯದ ಮುಂಭಾಗ ಪ್ರತಿಭಟಿಸಿದರು.

''ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸರಕಾರ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ. ಗಣಪತಿ ತಂದೆ ಹಾಗೂ ತಮ್ಮನ ಮೇಲೆ ಒತ್ತಡ ಹೇರಿ ಪ್ರಕರಣವನ್ನು ತಿರುಚುವ ಯತ್ನ ನಡೆಸುತ್ತಿರುವುದು ನಾಚಿಗೆಗೇಡಿನ ಸಂಗತಿ'' ಎಂದು ಆರೋಪಿಸಿ ಘೋಷಣೆ ಕೂಗಿದರು.

''ರಾಜ್ಯದಲ್ಲಿ ದಕ್ಷ , ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷ ಣೆ ಇಲ್ಲದಂತಾಗಿದ್ದು, ರಾಜಕಾರಣಿಗಳಿಂದ ನಿರಂತರ ಕಿರುಕುಳ ನೀಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಡಿ.ಕೆ.ರವಿ, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್‌ ಮೊದಲಾದ ಅಧಿಕಾರಿಗಳು ಸಾವಿನ ಹಾದಿ ತುಳಿಯುತ್ತಿದ್ದಾರೆ. ಕಾಂಗ್ರೆಸ್‌ ಸರಕಾರದಲ್ಲಿ ಅಧಿಕಾರಿಗಳಿಗೆ ಕಿರುಕುಳ ಹೆಚ್ಚಾಗಿರುವುದು ಖಂಡನೀಯ. ಆದ್ದರಿಂದ ಸರಕಾರ ಈ ಕೂಡಲೇ ಗಣಪತಿಯವರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು'' ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸೇನಾಪಡೆಯ ಜಿಲ್ಲಾಧ್ಯಕ್ಷ ತೇಜೇಶ್‌ ಲೋಕೇಶ್‌ಗೌಡ, ಯುವ ಘಟಕದ ಅಧ್ಯಕ್ಷ ಪ್ರಜೀಶ್‌, ಜಗದೀಶ್‌, ಕುಮಾರ್‌ಗೌಡ, ನಂದಕುಮಾರ್‌, ಶಾಂತಮೂರ್ತಿ, ನಿತ್ಯಾನಂದ, ಬಸವರಾಜು ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ