ಆ್ಯಪ್ನಗರ

8 ಜೋಡಿ ಸಾಮೂಹಿಕ ವಿವಾಹ

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ ಗುರುವಾರ ಆಯೋಜಿಸಲಾದ ಆರ್ಯ ಈಡಿಗ ಸಮಾಜದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 8 ಜೋಡಿಗಳು ಸಪ್ತಪದಿ ತುಳಿದವು.

Vijaya Karnataka Web 24 Mar 2017, 8:47 am
ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ ಗುರುವಾರ ಆಯೋಜಿಸಲಾದ ಆರ್ಯ ಈಡಿಗ ಸಮಾಜದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 8 ಜೋಡಿಗಳು ಸಪ್ತಪದಿ ತುಳಿದವು.
Vijaya Karnataka Web 8
8 ಜೋಡಿ ಸಾಮೂಹಿಕ ವಿವಾಹ


ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ಕೆ.ಪೋತರಾಜ್ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಸರಳ ವಿವಾಹವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ. ಅದ್ಧೂರಿ ಮದುವೆಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು ಇದರಿಂದ ಹಣ ವ್ಯಯವಾಗುತ್ತಿದೆ. ಇದರಿಂದ ಹೆಣ್ಣಿನ ಮನೆಯವರು ಸಾಲಗಾರರಾಗುತ್ತಿದ್ದಾರೆ ಎಂದರು.

ದುಂದುವೆಚ್ಚ ಕಡಿಮೆ ಮಾಡಿ ಸರಳವಾಗಿ ವಿವಾಹವಾಗುವುದರಿಂದ ಸಾಲದ ಹೊರೆ ಕಡಿಮೆಯಾಗುತ್ತದೆ. ಇದರಿಂದ ಹಣ ಉಳಿತಾಯವಾಗುತ್ತದೆ. ಈ ನಿಟ್ಟಿನಲ್ಲಿ ಸರಳ ವಿವಾಹವನ್ನು ಪ್ರೋತ್ಸಾಹಿಸುವ ಸಲುವಾಗಿ ಸಾಮೂಹಿಕ ವಿವಾಹ ಆಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ತಿಮ್ಮೇಗೌಡ, ಮಾಜಿ ಅಧ್ಯಕ್ಷ ಮಾಂಬಳ್ಳಿ ಕೆ.ಪಾಪೇಗೌಡ, ಪಾಲಿಕೆ ಸದಸ್ಯ ದೇವರಾಜ್, ಆರ್ಯ ಈಡಿಗರ ಯುವಕ ಸಂಘದ ಅಧ್ಯಕ್ಷ ಸೋಮಶೇಖರ್ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ