ಆ್ಯಪ್ನಗರ

ಮೈಸೂರು: 895 ಮಂದಿಗೆ ಕೊರೊನಾ ಸೋಂಕು, 449 ಮಂದಿ ಗುಣಮುಖ, ಒಂದೇ ದಿನ 18 ಮಂದಿ ಸಾವು

895 ಹೊಸ ಪ್ರಕರಣಗಳೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 15775ಕ್ಕೆ ಏರಿಕೆಯಾಗಿದೆ. ಜತೆಗೆ 449 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುಣಮುಖರಾದವರ ಸಂಖ್ಯೆ 11105ಕ್ಕೆ ಏರಿಕೆಯಾಗಿದೆ.

Vijaya Karnataka Web 27 Aug 2020, 10:27 pm
ಮೈಸೂರು: ಜಿಲ್ಲೆಯಲ್ಲಿ ಗುರುವಾರ 895 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿನಿಂದ 18 ಮಂದಿ ಮೃತಪಟ್ಟಿದ್ದಾರೆ.
Vijaya Karnataka Web ಕೊರೊನಾ
ಕೊರೊನಾ


ಒಂದೇ ದಿನ ಇದರೊಂದಿಗೆ ಸೋಂಕಿತರ ಸಂಖ್ಯೆ 15 ಸಾವಿರ ಗಡಿ ದಾಟಿದೆ. ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ದಾಖಲಾಗದೆ ಉಳಿದಿದ್ದ ಪ್ರಕರಣಗಳು ಕಳೆದ ಮೂರು ದಿನಗಳಿಂದಲೂ ದಾಖಲಾಗುತ್ತಿದ್ದು, ಗುರುವಾರವೂ ದಾಖಲೆಯ ಪ್ರಕರಣಗಳು ವರದಿಯಾಗಿವೆ.

895 ಹೊಸ ಪ್ರಕರಣಗಳೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 15775ಕ್ಕೆ ಏರಿಕೆಯಾಗಿದೆ. ಜತೆಗೆ 449 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುಣಮುಖರಾದವರ ಸಂಖ್ಯೆ 11105ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 4271 ಸೋಂಕಿತರಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

400ರ ಗಡಿ ತಲುಪಿದ ಸಾವು

ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 400ರ ಗಡಿ ತಲುಪಿದೆ. ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 18 ಮಂದಿ ಸೋಂಕಿತರು ಗುರುವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿಗೆ ಮೃತಪಟ್ಟವರ ಸಂಖ್ಯೆ 399ಕ್ಕೆ ಏರಿಕೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ