ಆ್ಯಪ್ನಗರ

ಪ್ರಧಾನಿ ವಿರುದ್ಧ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌

ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದವರ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸೈಬರ್‌ ಪೊಲೀಸ್‌ ಠಾಣೆಗೆ ದೂರು ನೀಡಿ ಬಳಿಕ ಪ್ರತಿಭಟಿಸಿದರು.

Vijaya Karnataka 27 Jun 2019, 5:00 am
ಮೈಸೂರು: ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದವರ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸೈಬರ್‌ ಪೊಲೀಸ್‌ ಠಾಣೆಗೆ ದೂರು ನೀಡಿ ಬಳಿಕ ಪ್ರತಿಭಟಿಸಿದರು.
Vijaya Karnataka Web a derogatory post against the prime minister
ಪ್ರಧಾನಿ ವಿರುದ್ಧ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌


ಅಶೋಕಪುರಂ ಪೊಲೀಸ್‌ ಠಾಣೆ ಎದುರು ಬುಧವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ''ವಿಕೃತ ಪೋಸ್ಟ್‌ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು,'' ಎಂದು ಆಗ್ರಹಿಸಿದರು.

''ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದ ಫಲವಾಗಿ ವಿಶ್ವದೆಲ್ಲೆಡೆ ಯೋಗ ದಿನಾಚರಣೆ ನಡೆಯುತ್ತಿದ್ದು, ಇದರ ವಿರುದ್ಧ ಇಬ್ಬರು ಫೇಸ್‌ಬುಕ್‌ನಲ್ಲಿ ಪ್ರಧಾನಿ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು,'' ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗೋಕುಲ್‌ ಗೋವರ್ಧನ್‌, ಪ್ರಧಾನ ಕಾರ್ಯದರ್ಶಿ ಕೆ.ಎಂ.ನಿಶಾಂತ್‌, ದೂರುದಾರ ಸಂತೋಷ್‌ಕುಮಾರ್‌, ನಾರಾಯಣ್‌, ಲೋಹಿತ್‌, ಮನೋಜ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ