ಆ್ಯಪ್ನಗರ

ಮಗುವಿಗೊಂದು ಮರ

ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಸಹಕಾರ ಮುಖ್ಯ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಬಸವರಾಜು ತಿಳಿಸಿದರು.

Vijaya Karnataka 8 Jun 2018, 5:00 am
ಮೈಸೂರು: ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಸಹಕಾರ ಮುಖ್ಯ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಬಸವರಾಜು ತಿಳಿಸಿದರು.
Vijaya Karnataka Web a tree for a baby
ಮಗುವಿಗೊಂದು ಮರ


ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ(ಆರ್‌ಎಲ್‌ಎಚ್‌ಪಿ) ಮೈಸೂರು ವತಿಯಿಂದ ಗುರುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಕೋಟೆ ಆಂಜನೇಯಸ್ವಾಮಿ ದೇಗುಲ ಮುಂಭಾಗದಿಂದ ಆಯೋಜಿಸಿದ್ದ ಜಾಗೃತಿ ಜಾಥಾ ಹಾಗೂ ಸಸಿ ವಿತರಣೆ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.

ಆರೋಗ್ಯ ಇಲಾಖೆಯಿಂದ ಪರಿಸರ ದಿನಾಚರಣೆ ಅಂಗವಾಗಿ ನಾನಾ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇವೆ. ಈ ದಿಸೆಯಲ್ಲಿ ಆರ್‌ಎಲ್‌ಎಚ್‌ಪಿ ಪ್ರತಿ ವರ್ಷ ಪರಿಸರ ದಿನಾಚರಣೆಯನ್ನು ಯುವ ಜನರೊಂದಿಗೆ ಆಚರಿಸುತ್ತಿರುವುದು ಸ್ವಾಗತಾರ್ಹ. ಸಸಿ ವಿತರಣೆ ಕಾರ್ಯ ಮಾಡುತ್ತಿರುವುದನ್ನು ಇತರ ಸಂಘ-ಸಂಸ್ಥೆಗಳು ಅನುಸರಿಸಬೇಕಿದೆ ಎಂದು ಕಿವಿಮಾತು ಹೇಳಿದರು.

ಜಾಥಾದಲ್ಲಿ 'ಮನೆಗೊಂದು ಮಗು, ಮಗುವಿಗೊಂದು ಮರ', 'ಭೂಮಿ,ಗಾಳಿ, ನೀರು ನಮ್ಮದು, ನಮ್ಮ ಮುಂದಿನ ಪೀಳಿಗೆಗಾಗಿ ಉಳಿಸಿ', 'ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ' ಎಂಬ ನಾಮಫಲಕಗಳು ಹಿಡಿದ 50 ಕ್ಕೂ ಹೆಚ್ಚು ಮಕ್ಕಳು ಜಾಥಾ ನಡೆಸುವ ಮೂಲಕ ಪರಿಸರ ಜಾಗೃತಿ ಮೂಡಿಸಲೆತ್ನಿಸಿದರು.

ಕೋಟೆ ಆಂಜನೇಯ ದೇವಾಲಯದಿಂದ ಹೊರಟ ಜಾಥಾ ಕೃಷ್ಣರಾಜ ವೃತ್ತ, ಅರಸು ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿ, ಡಿಸಿಗೆ ಪರಿಸರ ಸಂರಕ್ಷಣೆ ಕುರಿತು ಮನವಿ ಸಲ್ಲಿಸಲಾಯಿತು.

ಮಹಾನಗಗರ ಪಾಲಿಕೆ ಹೆಚ್ಚುವರಿ ಆಯುಕ್ತ ರವೀಂದ್ರ, ಆರ್‌.ಎಲ್‌.ಎಚ್‌.ಪಿ.ನಿರ್ದೇಶಕಿ ಸರಸ್ವತಿ ಇನ್ನಿತರರು ಜಾಥಾದಲ್ಲಿ ಭಾಗವಹಿಸಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ