ಆ್ಯಪ್ನಗರ

ಮೈಸೂರು ಮಹಾನಗರ ಪಾಲಿಕೆ ಉಪ ಆಯುಕ್ತ ನಾಗರಾಜು ಮನೆ ಮೇಲೆ ಎಸಿಬಿ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಮೈಸೂರು ಮಹಾನಗರ ಪಾಲಿಕೆ ಅಭಿವೃದ್ಧಿ ಅಧಿಕಾರಿ ಮತ್ತು ಉಪ ಆಯುಕ್ತ ನಾಗರಾಜು ಮನೆ ಮೇಲೆ ದಾಳಿ ನಡೆಸಿದ್ದಾರೆ.

Vijaya Karnataka Web 26 Aug 2020, 11:47 am
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ.
Vijaya Karnataka Web Nagaraju


ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಮೈಸೂರು ಮಹಾನಗರ ಪಾಲಿಕೆ ಅಭಿವೃದ್ಧಿ ಅಧಿಕಾರಿ ಮತ್ತು ಉಪ ಆಯುಕ್ತ ನಾಗರಾಜು ಮನೆ ಮೇಲೆ ದಾಳಿ ನಡೆಸಿದ್ದಾರೆ.

ಈ ಬಾರಿ ಸರಳ ಹಾಗೂ ಶಾಸ್ತ್ರೋಕ್ತ ದಸರೆ ನಡೆಯಲಿ: ಎಂಎಲ್‌ಸಿ ಎಚ್‌ ವಿಶ್ವನಾಥ್ ಆಶಯ

ಉಪ ಆಯುಕ್ತ ನಾಗರಾಜು ಅವರ ಕುವೆಂಪು ನಗರದಲ್ಲಿರುವ ನಿವಾಸ, ಪಾಲಿಕೆ ಕಚೇರಿ ಮತ್ತು ರಾಮನಗರದ ಸಂಬಂಧಿಕರ ಮನೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ನಾಗರಾಜು ಮೇಲೆ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿಕೊಂಡಿರೋ ಆರೋಪ ಬಂದಿತ್ತು. ಈ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮೈಸೂರು ಪೊಲೀಸ್ ಕಮೀಷನರ್, ಎಸಿಪಿಗೂ ಕೊರೊನಾ: ಜಿಲ್ಲಾದ್ಯಂತ ಸೋಂಕು

ಬೆಂಗಳೂರು ಎಸಿಬಿ ಇಲಾಖೆಯ ಎಸ್‌ಪಿಯವರ ಮಾರ್ಗದರ್ಶನದಲ್ಲಿ ರಾಮನಗರ ಡಿವೈಎಸ್‌ಪಿ ನೇತೃತ್ವದಲ್ಲಿ ಮೈಸೂರು, ರಾಮನಗರದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ನಾಗರಾಜು ಅವರಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಲ್ಲದೇ ಭ್ರಷ್ಟಾಚಾರ ನಡೆಸಿದ್ದಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ