ಆ್ಯಪ್ನಗರ

ರಾಜ್ಯ ಕರಾವಳಿ ತೀರದಲ್ಲಿದ್ದಾರೆ ಬಾಂಗ್ಲಾ ಉಗ್ರರು: ಬಸವರಾಜ್ ಬೊಮ್ಮಾಯಿ ಸ್ಫೋಟಕ ಮಾಹಿತಿ

ಬಾಂಗ್ಲಾ ಮೂಲದ ಉಗ್ರಗಾಮಿಗಳು ಕರ್ನಾಟಕಕ್ಕೆ ಬಂದಿದ್ದು, ಕರಾವಳಿ ತೀರ ಪ್ರದೇಶದಲ್ಲಿ ನೆಲೆಸಿದ್ದಾರೆ ಎಂಬ ಮಾಹಿತಿ ಲಭ್ಯವಿದೆ. ಮೈಸೂರಿನಲ್ಲಿ ಈ ಬಗ್ಗೆ ಗೃಹಸಚಿವರು ಹೇಳಿಕೆ ನೀಡಿದ್ದಾರೆ.

Vijaya Karnataka Web 18 Oct 2019, 2:59 pm
ಮೈಸೂರು : ನಮ್ಮ ರಾಜ್ಯಕ್ಕೆ ಬಾಂಗ್ಲಾ ಮೂಲದ ಉಗ್ರಗಾಮಿ ಸದಸ್ಯರು ನುಸುಳಿರುವ ಬಗ್ಗೆ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ಮುಜಾಯಿದ್ದೀನ್ ಸಂಘಟನೆಯ ಉಗ್ರರನ್ನು ಸದೆಬಡಿಯಲು ಖಾಕಿ ಪಡೆ ಕಾರ್ಯೋನ್ಮುಖವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಫೋಟಕ ಮಾಹಿತಿ ನೀಡಿದ್ದಾರೆ.
Vijaya Karnataka Web bangla


ಮೈಸೂರಿನಲ್ಲಿ ಉಪ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈಗಾಗಲೇ ಜಮ್ಮು ಕಾಶ್ಮೀರ ಹಾಗೂ ಬಾಂಗ್ಲಾದೇಶದ ಗಡಿ ಮೂಲಕ ಉಗ್ರರು ನಮ್ಮ ದೇಶವನ್ನು ಪ್ರವೇಶಿಸಿದ್ದಾರೆ. ಈ ಉಗ್ರರು ಹೆಚ್ಚಾಗಿ ನಮ್ಮ ರಾಜ್ಯಕ್ಕೆ ಪ್ರವೇಶ ಮಾಡಿದ್ದಾರೆಂದು ಕೇಂದ್ರ ಗೃಹ ಇಲಾಖೆ ಈಗಾಗಲೇ ಮಾಹಿತಿ ನೀಡಿದೆ.

ರಾಜ್ಯದ ಕರಾವಳಿ ಪ್ರದೇಶದಲ್ಲಿ ಸಕ್ರೀರಾಗಿರುವ ಉಗ್ರರು:
ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಉಗ್ರರು ಸಕ್ರಿಯರಾಗಿದ್ದಾರೆ. ಈಗಾಗಲೇ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡಲಾಗಿದ್ದು, ಅತ್ಯಂತ ಜನನಿಬಿಡ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಕೆಲವೊಮ್ಮೆ ಹರಡುವ ವದಂತಿಗಳಿಗೆ ರಾಜ್ಯದ ಜನತೆ ಕಿವಿಗೊಡುವ ಅಗತ್ಯವಿಲ್ಲ ಈಗಾಗಲೇ ರಾಜ್ಯಕ್ಕೆ ನುಸುಳಿರುವ ಬಾಂಗ್ಲಾ ಮುಜಾಯಿದ್ದೀನ್ ಪಡೆಯ ಉಗ್ರರನ್ನು ಸದೆಬಡಿಯಲು ನಮ್ಮ ಖಾಕಿ ಪಡೆ ಸಜ್ಜಾಗಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನ 20ಕ್ಕೂ ಹೆಚ್ಚು ಸ್ಥಳದಲ್ಲಿ ಉಗ್ರರ ಅಡಗುತಾಣ:

ಜೊತೆಗೆ, ಈಗಾಗಲೇ ಬೆಂಗಳೂರಿನ 20ಕ್ಕೂ ಹೆಚ್ಚು ಸ್ಥಳದಲ್ಲಿ ಉಗ್ರರ ಅಡಗುತಾಣ ಪತ್ತೆಯಾಗಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಕೆಲವೊಂದು ಮಾಹಿತಿಗಳನ್ನು ತಿಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಿಡಿಸಿದರು.

ಪೊಲೀಸ್ ಇಲಾಖೆಯಲ್ಲಿ 17 ಸಾವಿರ ಪೋಸ್ಟ್ ಖಾಲಿ:

ಮುಂದಿನ ವರ್ಷದೊಳಗೆ 16 ಸಾವಿರ ಪೊಲೀಸ್ ಮತ್ತು 1 ಸಾವಿರ ಸಬ್ ಇನ್ಸ್ ಪೆಕ್ಟರ್ ಹುದ್ದೆ ಭರ್ತಿಯಾಗಲಿದೆ. ಈ ವರ್ಷ 6 ಸಾವಿರ ಹುದ್ದ ಭರ್ತಿ ಮಾಡಲಾಗಲು ಮುಂದಾಗಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ ತರಲಿದ್ದೇವೆ, ತಂತ್ರಜ್ಞಾನ ಹೆಚ್ಚಾಗುತ್ತಿದ್ದಂತೆ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ. ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳನ್ನು ಭೇದಿಸುವುದು ಸವಾಲಿನ ಕೆಲಸವಾಗಿದೆ. ಪೊಲೀಸರು ಪ್ರಾಮಾಣಿಕವಾಗಿರಬೇಕು ಕರ್ತವ್ಯ ನಿಷ್ಠೆ ಮರೆಯಬಾರದು ಸತ್ಯವೇ ತಂದೆ , ನ್ಯಾಯವೇ ತಾಯಿ ಇದ್ದಂತೆ ,ಸತ್ಯ ನ್ಯಾಯ ಎತ್ತಿ ಹಿಡಿಯುವ ಕೆಲಸವನ್ನು ಪೊಲೀಸರು ಮಾಡಬೇಕು ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ