ಆ್ಯಪ್ನಗರ

ಮೈಸೂರಿನಲ್ಲಿ ಮತ್ತೊಂದು ಕೊರೊನಾ ಪ್ರಕರಣ ದೃಢ, ಜಿಲ್ಲಾಧಿಕಾರಿ ಸ್ಪಷ್ಟನೆ

ಮೈಸೂರಿನ ಜನರಿಗೆ ಮತ್ತೆ ಆತಂಕದ ಸುದ್ದಿಯೊಂದು ಬಂದಿದೆ. ಜಿಲ್ಲೆಯಲ್ಲಿ ಎರಡನೇ ಕೋವಿಡ್‌-19 ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28ಕ್ಕೆ ಏರಿದೆ. ವ್ಯಕ್ತಿಯನ್ನು ಸದ್ಯ ಕೆ.ಆರ್‌.ಆಸ್ಪತ್ರೆಯಲ್ಲಿ ನಿಗಾ ಘಟಕದಲ್ಲಿ ಇಡಲಾಗಿದೆ.

Vijaya Karnataka Web 23 Mar 2020, 7:21 pm
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ 19 ಪ್ರಕರಣ ಬೆಳಕಿಗೆ ಬಂದಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.

ಮೈಸೂರಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ದೃಢವಾಗಿದ್ದು, ದುಬೈನಿಂದ ಆಗಮಿಸಿದ್ದ 45 ವರ್ಷದ ವ್ಯಕ್ತಿಗೆ ಕೊರೊನಾ ಇರುವ ಬಗ್ಗೆ ತಿಳಿದುಬಂದಿದೆ. ಸದ್ಯ ಅವರನ್ನು ಕೆ.ಆರ್‌.ಆಸ್ಪತ್ರೆಯ ನಿಗಾ ಘಟಕದಲ್ಲಿ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್‌ ಮಾಹಿತಿ ನೀಡಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಕೋವಿಡ್‌-19 ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಮಾರ್ಚ್ 21 ರಂದು ದುಬೈನಿಂದ ಕೊನೆಯ ವಿಮಾನದಲ್ಲಿ ಬಂದಿದ್ದ ವ್ಯಕ್ತಿ ಮಾರ್ಚ್ 22 ರಂದು ಬೆಂಗಳೂರಿನಿಂದ ಮೈಸೂರಿಗೆ ಟ್ಯಾಕ್ಸಿ ಮಾಡಿ ಬಂದಿದ್ದ. ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ಆಗಿದೆ. ಬೆಂಗಳೂರು - ಮೈಸೂರು ದಾರಿ ಮಧ್ಯೆ ಸೋಂಕಿತ ವ್ಯಕ್ತಿ ಟೀ ಬ್ರೇಕ್ ತೆಗೆದುಕೊಂಡಿದ್ದಾರೆ. ಆದರೆ ಎಲ್ಲಿ ಎಂದು ತಿಳಿದುಬಂದಿಲ್ಲ.

ಇದಾದ ಬಳಿಕ ಮೈಸೂರು ತಲುಪಿದ ವ್ಯಕ್ತಿ ಮೀನಾ ಬಜಾರ್‌ನಲ್ಲಿ ಸುಮಾರು ಹೊತ್ತು ಸಮಯ ಕಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ಕೊರೊನಾ ವೈರಸ್ ಲಕ್ಷಣಗಳು ಕಂಡುಬಂದ ಕಾರಣ ಮೈಸೂರಿಗೆ ಬಂದು ಕೆ.ಆರ್. ಆಸ್ಪತ್ರೆಗೆ ಹೋಗಿದ್ದಾರೆ. ಆತ ಓಡಾಡಿರುವ ರೂಟ್ ಮ್ಯಾಪ್ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್‌ ಮಾಹಿತಿ ನೀಡಿದ್ದಾರೆ.

ವ್ಯಕ್ತಿ ಓಡಾಡಿರುವ ಪ್ರದೇಶ, ಪ್ರಯಾಣಿಸಿದ ಫ್ಲೈಟ್‌ ನಲ್ಲಿದ್ದ ಪ್ಯಾಸೆಂಜರ್ ಬಗ್ಗೆ ಕೂಡ ಮಾಹಿತಿ ಪಡೆಯಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಮಾರ್ಚ್ 21 ರಂದು ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. 35 ವರ್ಷದ ವ್ಯಕ್ತಿಯಲ್ಲಿ ಕೋವಿಡ್‌-19 ಪತ್ತೆಯಾಗಿ, ಆತ ಕೂಡ ದುಬೈನಿಂದ ಬೆಂಗಳೂರಿಗೆ ಬಂದು ಬಳಿಕ ಟ್ಯಾಕ್ಸಿ ಮಾಡಿ ಮೈಸೂರಿಗೆ ಪ್ರಯಾಣ ಬೆಳೆಸಿದ್ದ ಸದ್ಯ ಆತ ಕೆ.ಆರ್‌.ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾನೆ ಎಂದು ಡಿಸಿ ಹೇಳಿದ್ದಾರೆ.



ಅನಗತ್ಯ ತಿರುಗಾಡಿದರೆ 2 ವರ್ಷ ಜೈಲು:

ಅನಗತ್ಯವಾಗಿ ಪೇಟೆಯಲ್ಲಿ ತಿರುಗಾಡುವ ಸಾರ್ವಜನಿಕರಿಗೆ ಜೈಲು. ಎಂದು ಮೈಸೂರು ಡಿಸಿ, ಪೊಲೀಸ್ ಕಮೀಷನರ್, ಎಸ್ಪಿ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಲಾಕ್ ಡೌನ್ ಆಗಿದ್ದರೂ ಜನರು ತಿರುಗಾಡಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಜನತೆಗೆ ಎಚ್ಚರಿಕೆ, ಮನವಿ ನೀಡುವ ಕಾಲ ಮುಗಿದಿದೆ. ಅನಗತ್ಯ ತಿರುಗಾಟ ನಡೆಸಿದರೆ ಎರಡು ವರ್ಷ ಜೈಲು ಶಿಕ್ಷೆ ಶಿಕ್ಷೆ ವಿಧಿಲಾಗುತ್ತದೆ ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ