ಆ್ಯಪ್ನಗರ

54 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಗೆ ತೆರೆ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಅಭಿನಂದನೆ

ಏಷಿಯನ್‌ ಪೇಂಟ್ಸ್‌ ಗೆ ಭೂಮಿ ನೀಡಿದ್ದ ರೈತ ಕುಟುಂಬಗಳ ಸದಸ್ಯರಿಗೆ ಕಾಯಂ ಉದ್ಯೋಗ ನೀಡಲು ಕಾರ್ಖಾನೆ ಆಡಳಿತ ಮಂಡಳಿ ಸಮ್ಮತಿ ಸೂಚಿಸಿದ್ದು, ಈ ಬಗ್ಗೆ ಡಿಸಿ ರೋಹಿಣಿ ಸಿಂಧೂರಿ ಪ್ರತಿಭಟನಾನಿರತರನ್ನು ಭೇಟಿಯಾಗಿ ಈ ವಿಚಾರ ತಿಳಿಸಿದ್ದಾರೆ.

Vijaya Karnataka Web 16 Jan 2021, 9:58 pm
ನಂಜನಗೂಡು: ಕಳೆದ 54 ದಿನಗಳಿಂದ ನಂಜನಗೂಡು ತಾಲೂಕಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿ ಏಷ್ಯನ್‌ ಪೇಂಟ್ಸ್ ಕಾರ್ಖಾನೆಯಲ್ಲಿ ಊದ್ಯೋಗ ನೀಡುವಂತೆ ನಡೆಸುತ್ತಿದ್ದ ಪ್ರತಿಭಟನೆಯ ಫಲವಾಗಿ ಸಂಸ್ಥೆಯು 53 ಸದಸ್ಯರಿಗೆ ಉದ್ಯೋಗ ನೀಡಲು ಮುಂದಾಗಿದೆ.
Vijaya Karnataka Web asian paints employees protest end in mysore
54 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಗೆ ತೆರೆ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಅಭಿನಂದನೆ


ಏಷಿಯನ್‌ ಪೇಂಟ್ಸ್‌ ಗೆ ಭೂಮಿ ನೀಡಿದ್ದ ರೈತ ಕುಟುಂಬಗಳ ಸದಸ್ಯರಿಗೆ ಕಾಯಂ ಉದ್ಯೋಗ ನೀಡಲು ಕಾರ್ಖಾನೆ ಆಡಳಿತ ಮಂಡಳಿ ಸಮ್ಮತಿ ಸೂಚಿಸಿದ್ದು, ಈ ಬಗ್ಗೆ ಡಿಸಿ ರೋಹಿಣಿ ಸಿಂಧೂರಿ ಪ್ರತಿಭಟನಾನಿರತರನ್ನು ಭೇಟಿಯಾಗಿ ಈ ವಿಚಾರ ಮುಟ್ಟಿಸಿದ್ದಾರೆ. ಅಲ್ಲದೇ ಇಲ್ಲಿಯವರೆಗೂ ಶಾಂತಿಯುತವಾಗಿ ಹೋರಾಟ ನಡೆಸಿದ ರೈತರನ್ನು ಇದೇ ವೇಳೆ ಅವರು ಶ್ಲಾಘಿಸಿದ್ದಾರೆ.

ಈ ವೇಳೆ ಮಾತನಾಡಿದ ಹಸಿರು ಸೇನೆಯ ಹೊಸಕೋಟೆ ಬಸವರಾಜು ಮಾತನಾಡಿ, ಜಿಲ್ಲಾಧಿಕಾರಿಯವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ 15 ದಿನಗಳ ಒಳಗೆ ವಿವಾದಕ್ಕೆ ತೆರೆ ಎಳೆಯುವುದಾಗಿ ಭರವಸೆ ನೀಡಿದ್ದರು. ಅವರು ತಿಳಿಸಿದಂತೆ ನಡೆದುಕೊಂಡಿದ್ದಾರೆ. ರೈತ ಕುಟುಂಬಗಳ ಪರವಾಗಿ ಜಿಲ್ಲಾಧಿಕಾರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಇನ್ನು ಸ್ಥಳೀಯ ನಿವಾಸಿ ಬಾಲು ಮಾತನಾಡಿ, ನಮ್ಮ ಹೋರಾಟದ ಅಂಗವಾಗಿ ಇಮ್ಮಾವು ಗ್ರಾಮದ 3 ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಬಹಿಷ್ಕರಿಸಲಾಗಿತ್ತು. ಸಮಸ್ಯೆ ಬಗೆಹರಿದಿರುವುದರಿಂದ ಚುನಾವಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಗ್ರಾಮ ಪಂಚಾಯಿತಿಯ ಉಪಚುನಾವಣೆ ವೇಳೆ ಈ ಸ್ಥಾನಗಳನ್ನು ಪರಿಗಣಿಸುವುದಾಗಿ ಈ ವೇಳೆ ಆಶ್ವಾಸನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ