ಆ್ಯಪ್ನಗರ

ಬಿಜೆಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿಯಲು ಸಿಎಂ, ಡಿಕೆಶಿ ಒತ್ತಡ ಕಾರಣ: ಹರ್ಷವರ್ಧನ್‌

ರಾಮನಗರ ವಿಧಾನಸಭೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್‌ ಕಣದಿಂದ ನಿವೃತ್ತರಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿರುವುದಕ್ಕೆ ನಂಜನಗೂಡಿನ ಬಿಜೆಪಿ ಶಾಸಕ, ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಬಿ.ಹರ್ಷವರ್ಧನ್‌ ಅಚ್ಚರಿ ವ್ಯಕ್ತಪಡಿಸಿದ್ದಾರೆ.

Vijaya Karnataka 2 Nov 2018, 5:00 am
ಮೈಸೂರು: ರಾಮನಗರ ವಿಧಾನಸಭೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್‌ ಕಣದಿಂದ ನಿವೃತ್ತರಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿರುವುದಕ್ಕೆ ನಂಜನಗೂಡಿನ ಬಿಜೆಪಿ ಶಾಸಕ, ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಬಿ.ಹರ್ಷವರ್ಧನ್‌ ಅಚ್ಚರಿ ವ್ಯಕ್ತಪಡಿಸಿದ್ದಾರೆ.
Vijaya Karnataka Web bjp candidate
ಬಿಜೆಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿಯಲು ಸಿಎಂ, ಡಿಕೆಶಿ ಒತ್ತಡ ಕಾರಣ: ಹರ್ಷವರ್ಧನ್‌


''ಬಿಜೆಪಿ ಅಭ್ಯರ್ಥಿ ಕಣದಿಂದ ನಿವೃತ್ತರಾಗಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಅವರ ಒತ್ತಡವೇ ಕಾರಣವಾಗಿದೆ. ಈ ಬೆಳವಣಿಗೆಯು ಜನತಂತ್ರವನ್ನೇ ಒಂದು ರೀತಿ ಅಪಹಾಸ್ಯ ಮಾಡಿದಂತಾಗಿದೆ. ಚುನಾವಣೆ ವೇಳೆ ಪಕ್ಷಕ್ಕೆ ಸೇರ್ಪಡೆಯಾದವರಿಗೆ ಟಿಕೆಟ್‌ ನೀಡುವಾಗ ಎಚ್ಚರಿಕೆಯಿಂದ ಇರಬೇಕು ಎಂಬ ವಿಚಾರದಲ್ಲೂ ನಮಗೆ ಇದು ಪಾಠವಾಗಿದೆ. ಪಕ್ಷದ ಅಭ್ಯರ್ಥಿಯ ಈ ಕ್ರಮ ಪಕ್ಷಕ್ಕೆ ಮುಜುಗರ ತಂದಿದೆ,''ಎಂದು ಹರ್ಷವರ್ಧನ್‌ ಪ್ರತಿಕ್ರಿಯಿಸಿದ್ದಾರೆ.

ರಾಮದಾಸ್‌ ಪ್ರತಿಕ್ರಿಯೆ: ''ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್‌ ಕಣದಿಂದ ನಿವೃತ್ತರಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹ. ರಾಜಕೀಯ ನೈತಿಕತೆಗೆ ದೊಡ್ಡ ಕೊಡಲಿ ಪೆಟ್ಟು,''ಎಂದು ಬಿಜೆಪಿ ಶಾಸಕ ಎಸ್‌.ಎ.ರಾಮದಾಸ್‌ ಹೇಳಿದ್ದಾರೆ.

''ಮುಖ್ಯಮಂತ್ರಿಯಾದವರು ತಮ್ಮ ಸರಕಾರದ ಸಾಧನೆಗಳನ್ನು ಹೇಳಿ ಗೆಲ್ಲಬೇಕು. ಆದರೆ, ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಅನ್ಯಮಾರ್ಗದಿಂದ ಎದುರಾಳಿ ಅಭ್ಯರ್ಥಿಯು ಕಣದಿಂದ ನಿವೃತ್ತಿಯಾಗುವಂತೆ ಮಾಡಿ ತಮ್ಮ ಹತಾಶ ಮನೋಭಾವವನ್ನು ಪ್ರದರ್ಶಿಸಿದ್ದಾರೆ,''ಎಂದು ರಾಮದಾಸ್‌ ಆರೋಪಿಸಿದ್ದಾರೆ.

''ಬಿಜೆಪಿ ರಾಮನಗರ ಕ್ಷೇತ್ರವನ್ನು ಕಳೆದುಕೊಳ್ಳಬಹುದು. ಆದರೆ, ಇಲ್ಲಿನ ಕಾಂಗ್ರೆಸ್‌, ಜೆಡಿಎಸ್‌ ವರ್ತನೆಗೆ ರಾಜ್ಯದ ಜನರು ಉಪ ಚುನಾವಣೆಯಲ್ಲಿ ಉತ್ತರ ಕೊಡುವ ವಿಶ್ವಾಸವಿದೆ,''ಎಂದು ರಾಮದಾಸ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ