ಆ್ಯಪ್ನಗರ

ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದ ಬಿಎಸ್‌ವೈ

ನಂಜನಗೂಡು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಆಯೋಜಿಸಲಾಗಿದ್ದ ವಿಜಯೋತ್ಸವ ಕಾರ‍್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೋಮವಾರ ಬೆಳಗ್ಗೆ ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದುಕೊಂಡರು.

Vijaya Karnataka 7 Aug 2018, 5:00 am
ನಂಜನಗೂಡು : ನಂಜನಗೂಡು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಆಯೋಜಿಸಲಾಗಿದ್ದ ವಿಜಯೋತ್ಸವ ಕಾರ‍್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೋಮವಾರ ಬೆಳಗ್ಗೆ ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದುಕೊಂಡರು.
Vijaya Karnataka Web bsy with srikanteswara swamy visits
ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದ ಬಿಎಸ್‌ವೈ


ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಒಳಿತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ಇನ್ನೇನು ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗಲಿದ್ದು , ಚುನಾವಣೆಯನ್ನು ಎದುರಿಸುವ ಶಕ್ತಿ ದಯಪಾಲಿಸುವಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದರು.

''ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟದಲ್ಲಿ ಉಂಟಾಗಿರುವ ಗೊಂದಲದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಎದುರಾಳಿಗಳ ಸ್ಪರ್ಧೆ ಬಗ್ಗೆ ನಮಗೆ ಯಾವುದೇ ಅಳುಕಿಲ್ಲ . ನಮ್ಮ ಸಾಮರ್ಥ್ಯ‌ದ ಮೇಲೆ ಪಕ್ಷ ವನ್ನು ಗೆಲುವಿನತ್ತ ಕೊಂಡೊಯ್ಯಲಿದ್ದೇವೆ '' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದಕ್ಕೂ ಮೊದಲು ದೇವಾಲಯದ ಆಡಳಿತ ಮಂಡಳಿ ವತಿಯಿಂದ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬರಮಾಡಿಕೊಂಡು ಫಲಪುಷ್ಪ ತಾಂಬೂಲದೊಂದಿಗೆ ಬೀಳ್ಕೊಡಲಾಯಿತು.

ನಂತರ ಅವರು ಕಪಿಲಾ ನದಿ ತೀರದಲ್ಲಿರುವ ಶ್ರೀ ಪರಶುರಾಮ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ನದಿಗೆ ಉಪ್ಪು ಹಾಗೂ ಬೆಲ್ಲವನ್ನು ಅರ್ಪಣೆ ಮಾಡಿದರು.

ಗುಂಡ್ಲುಪೇಟೆ ಶಾಸಕ ನಿರಂಜನಕುಮಾರ್‌, ಎಸ್‌.ಸಿ.ಅಶೋಕ್‌, ಕಾ.ಪು. ಸಿದ್ಧಲಿಂಗಸ್ವಾಮಿ, ವಿನಯ್‌ಕುಮಾರ್‌ ಮುಂತಾದವರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ