ಆ್ಯಪ್ನಗರ

ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಮಾಜಿ ಶಾಸಕನಾ, ಬಾರಲ್ಲಿ ಕುಳಿತು ಗಲಾಟೆ ಮಾಡಿಕೊಂಡನಲ್ಲ ಅವನಾ?

ನಾನು ಪಕ್ಷದ ಉಪಾಧ್ಯಕ್ಷನಾಗಿ ನನ್ನ ಇತಿಮಿತಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಯಾವ ಹೋರಾಟವನ್ನೂ ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ. ಅದು ನನಗೆ ಸಂಬಂಧಪಟ್ಟ ವಿಚಾರವೂ ಆಗಿಲ್ಲ. ಎಲ್ಲರಿಗೂ ನ್ಯಾಯ ದೊರಕಿಸುವ ಶಕ್ತಿ, ರಾಜಕೀಯ ಅನುಭವ ಸಿಎಂಗೆ ಇದೆ

Vijaya Karnataka Web 13 Feb 2021, 11:49 pm
ಮೈಸೂರು: ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು.? ಮಾಜಿ ಶಾಸಕನಾ ಅಥವಾ ಬಾರಲ್ಲಿ ಕುಳಿತು ಗಲಾಟೆ ಮಾಡಿಕೊಂಡನಲ್ಲ ಅವನಾ.? ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.
Vijaya Karnataka Web by vijayendra attacks vijayanand kashappanavar
ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಮಾಜಿ ಶಾಸಕನಾ, ಬಾರಲ್ಲಿ ಕುಳಿತು ಗಲಾಟೆ ಮಾಡಿಕೊಂಡನಲ್ಲ ಅವನಾ?


ಬಿ ವೈ ವಿಜಯೇಂದ್ರ ಕೆಲ ಮಠಾಧೀಶರನ್ನು ಕರೆದು ಸಭೆ ನಡೆಸುತ್ತಿದ್ದಾರೆ ಎಂದು ಕಾಶಪ್ಪನವರ್‌ ಕೊಟ್ಟ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಸದ್ಯ ಎಲ್ಲ ಸಮುದಾಯಗಳಿಗೂ ಮೀಸಲಾತಿ ಕೇಳುವ ಹಕ್ಕಿದೆ. ಸವಾಲುಗಳನ್ನೂ ನಿಭಾಯಿಸುವ ಶಕ್ತಿ ಯಡಿಯೂರಪ್ಪ ಅವರಿಗೆ ಎಂದಿಗೂ ಇದೆ. ಯಾರೋ ಹಾದಿ ಬೀದಿಯಲ್ಲಿ ನಿಂತು ಏನೇನೋ ಹೇಳಿಕೆ ನೀಡಬಾರದು. ಯಾರ ಯೋಗ್ಯತೆ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ನಾನು ಪಕ್ಷದ ಉಪಾಧ್ಯಕ್ಷನಾಗಿ ನನ್ನ ಇತಿಮಿತಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಯಾವ ಹೋರಾಟವನ್ನೂ ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ. ಅದು ನನಗೆ ಸಂಬಂಧಪಟ್ಟ ವಿಚಾರವೂ ಆಗಿಲ್ಲ. ಯಡಿಯೂರಪ್ಪ ಅವರು ಯಾವ ಸಮುದಾಯವನ್ನೂ ಹೊಡೆಯುವ ಕುತಂತ್ರಕ್ಕೆ ಕೈ ಹಾಕುವುದಿಲ್ಲ. ಎಲ್ಲರಿಗೂ ನ್ಯಾಯ ದೊರಕಿಸುವ ಶಕ್ತಿ, ರಾಜಕೀಯ ಅನುಭವ ಅವರಿಗೆ ಎಂದಿಗೂ ಇದೆ ಎಂದರು.

ಇನ್ನು ಯಾವ ಸ್ವಾಮೀಜಿಗಳಾದರೂ ಸರಿಯೇ ಮೀಸಲಾತಿ ಹೋರಾಟ ಮಾಡುವುದಕ್ಕೆ ನಮ್ಮ ತಕರಾರು ಇಲ್ಲ. ತಮ್ಮ ಸಮುದಾಯಗಳ ಪರವಾಗಿ ಹೋರಾಟ ಮಾಡುವುದು ಸರಿಯಾದ ನಿರ್ಧಾರವೇ ಆಗಿದೆ. ಆದರೆ ಕೆಲವರು ಮೀಸಲಾತಿ ಹೋರಾಟವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ