ಆ್ಯಪ್ನಗರ

ಶಿವಮೊಗ್ಗದಲ್ಲಿ ಸ್ಫೋಟ: ಕಲ್ಲುಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ! ಬಿಎಸ್‌ವೈ

ರಾಜ್ಯದಲ್ಲಿ ಕಲ್ಲುಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಮಾತನಾಡಿದ ಅವರು ಈ ಕುರಿತಾಗಿ ಏನು ಹೇಳಿದ್ದಾರೆ ಎಂಬುವುದರ ವಿವರ ಇಲ್ಲಿದೆ.

Vijaya Karnataka Web 23 Jan 2021, 11:47 am
ಮೈಸೂರು: ಕಲ್ಲುಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಶನಿವಾರ ಮಾತನಾಡಿದ ಅವರು ಅಕ್ರಮ ಗಣಿಗಾರಿಕೆಯನ್ನು ನಡೆಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Vijaya Karnataka Web BS Yediyurappa
CM BS Yediyurappa


ಶಿವಮೊಗ್ಗದಲ್ಲಿ ನಡೆದ ಡೈನಾಮೈಟ್ ಸ್ಫೋಟದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಅವಕಾಶ ಇಲ್ಲ, ಅಕ್ರಮವಾಗಿದ್ದರೆ ಅರ್ಜಿ ಕೊಟ್ಟು ಸಕ್ರಮ ಮಾಡಿಕೊಳ್ಳಲಿ ಎಂದು ಸೂಚನೆ ನೀಡಿದರು.

ಡೈನಾಮೈಟ್‌ ಸ್ಫೋಟಕ್ಕೆ ಮನೆ ಜಖಂ..! ಹಾಸಿಗೆ ಹಿಡಿದ ಮಕ್ಕಳು, ವೃದ್ಧರು..! ರಾತ್ರಿಯಿಡೀ ನಿದ್ದೆಗೆಟ್ಟ ಗ್ರಾಮಸ್ಥರು..!

ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ, ಹೀಗಾಗಿ ಕಲ್ಲು ಗಣಿಗಾರಿಕೆ ಅಗತ್ಯವಾಗಿದೆ. ಅನುಮತಿ ಪಡೆದ ಗಣಿಗಾರಿಕೆಗೆ ಅಭ್ಯಂತರವಿಲ್ಲ. ಆದರೆ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಘಟನೆಯಲ್ಲಿ ಜಖಂ ಆದ ಮನೆ ಪರಿಶೀಲನೆ ನಡೆಸಿ ಪರಿಹಾರ ನೀಡುವುದಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ತಿಳಿಸಿದರು. ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತೇನೆ, ಇದರ ಆಧಾರದಲ್ಲಿ ಘಟನೆಯಿಂದ ಜಖಂ ಆದ ಮನೆಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಶಿವಮೊಗ್ಗದಲ್ಲಿ ನಡೆದ ಡೈನಾಮೈಟ್ ಸ್ಫೋಟ ಘಟನೆಯಲ್ಲಿ ಐದು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧಗಳು ಗಣಿಗಾರಿಕೆಯ ವಿರುದ್ಧ ವ್ಯಕ್ತವಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ