ಆ್ಯಪ್ನಗರ

ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು: ಪೋಷಕರ ಆರೋಪ

ಕೆ.ಆರ್‌.ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಪೋಷಕರು ದೂರು ನೀಡಿದ್ದಾರೆ.

Vijaya Karnataka 26 Nov 2018, 5:00 am
ಮೈಸೂರು : ಕೆ.ಆರ್‌.ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಪೋಷಕರು ದೂರು ನೀಡಿದ್ದಾರೆ.
Vijaya Karnataka Web child death doctors negligence
ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು: ಪೋಷಕರ ಆರೋಪ


''ನಂಜನಗೂಡು ತಾಲೂಕಿನ ಕಡಬೂರು ಗ್ರಾಮದ ನಿವಾಸಿ ಗೌರಮ್ಮ ಅವರ ಪುತ್ರ ಅಭಿ(14) ಮೃತ ಬಾಲಕ.

ನ.19ರಂದು ಕಿವಿ ಸೋಂಕಿಗೆ ಚಿಕಿತ್ಸೆ ಕೊಡಿಸಲು ಕೆ.ಆರ್‌.ಆಸ್ಪತ್ರೆಗೆ ದಾಖಲಿಸಲಾಗಿದ್ದು, 20ರಂದು ಬೆಳಗ್ಗೆ 7.30ಕ್ಕೆ ವೈದ್ಯರು ಆಪರೇಷನ್‌ ಮಾಡಬೇಕು ಎಂದು ಶಸ್ತ್ರ ಚಿಕಿತ್ಸಾ ಕೊಠಡಿಗೆ ಕರೆದುಕೊಂಡು ಹೋಗಿದ್ದು, ಆಪರೇಷನ್‌ ಮಾಡುವ ಮೊದಲು ನೀಡಿದ ಇಂಜೆಕ್ಷ್‌ನಿಂದ ಅಭಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಈ ವೇಳೆ ಆಪರೇಷನ್‌ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ಐಸಿಯುಗೆ ಸೇರಿಸಿದ್ದು, ಅಂದಿನಿಂದ ಇಲ್ಲಿಯವರೆಗೂ ಯಾವುದೇ ಮಾಹಿತಿ ನೀಡದೇ ಸುಮ್ಮನಿದ್ದು, ಶನಿವಾರ ರಾತ್ರಿ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅಭಿ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಮೃತನ ಪೋಷಕರು ದೂರು ನೀಡಿದ್ದಾರೆ. ಈ ಸಂಬಂಧ ದೇವರಾಜ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ