ಆ್ಯಪ್ನಗರ

ಡಿ.14ರಿಂದ ತಲಕಾಡು ಪಂಚಲಿಂಗ ದರ್ಶನ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಕೊರೊನಾ ವೈರಸ್‌ ಪರಿಸ್ಥಿತಿ ಹಿನ್ನೆಲೆ ಡಿಸೆಂಬರ್‌ 14ರಿಂದ ನಡೆಯಲಿರುವ ತಲಕಾಡು ಪಂಚಲಿಂಗ ದರ್ಶನ ಮಹೋತ್ಸವವನ್ನು ವರ್ಚುವಲ್‌ ರೂಪ ಪಡೆದಿದ್ದು, ಸರಳವಾಗಿ ಆಚರಣೆಯಾಗಲಿದೆ. ಈ ಹಿನ್ನೆಲೆ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ, ರೂಪುರೇಷೆಗಳ ಬಗ್ಗೆ ಚರ್ಚಿಸಿದರು.

Vijaya Karnataka Web 25 Nov 2020, 4:40 pm
ಮೈಸೂರು: ಡಿಸೆಂಬರ್‌ 14 ರಿಂದ ತಲಕಾಡು ಪಂಚಲಿಂಗ ದರ್ಶನ ಮಹೋತ್ಸವ ನಿಗದಿಯಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
Vijaya Karnataka Web BSY TALAKADU


ತಲಕಾಡಿನ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ, ಡಿಸೆಂಬರ್‌ನಲ್ಲಿ ನಡೆಯಲಿರುವ ಪಂಚಲಿಂಗ ದರ್ಶನದ ರೂಪುರೇಷಗಳ ಬಗ್ಗೆ ಚರ್ಚಿಸಿದರು. ಕೊರೊನಾ ಕಾರಣದಿಂದಾಗಿ ಈ ಬಾರಿ ವರ್ಚುವಲ್‌ ಹಾಗೂ ಸರಳ ಪಂಚಲಿಂಗ ದರ್ಶನ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಈ ಹಿನ್ನೆಲೆ ಪೂರ್ವಭಾವಿ ಸಭೆ ನಡೆಸಿದ ಮುಖ್ಯಮಂತ್ರಿಗಳು, ಪಂಚಲಿಂಗ ದರ್ಶನ ಕಾರ್ಯಕ್ರಮದ ವಿವರ ಪಡೆದರು.

ಕೊರೊನಾ ವೈರಸ್‌ ಪರಿಸ್ಥಿತಿ ಹಿನ್ನೆಲೆ ಈ ಬಾರಿ ದಸರಾವನ್ನು ಹೇಗೆ ಆಚರಿಸಲಾಯಿತೋ ಅದೇ ರೀತಿ ತಲಕಾಡಿನ ಪಂಚಲಿಂಗ ದರ್ಶನ ಮಹೋತ್ಸವವನ್ನು ನೆರವೇರಿಸುವ ಯೋಜನೆಯನ್ನು ಜಿಲ್ಲಾಡಳಿತ ಹಾಕಿಕೊಂಡಿದೆ. ಆದ್ದರಿಂದ ವರ್ಚುವಲ್ ಆಗಿ ಪಂಚಲಿಂಗ ದರ್ಶನ ನಡೆಸಲು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮುಂದಿನ ಎರಡೂವರೆ ವರ್ಷವೂ ನಾನೇ ಸಿಎಂ: ನಾಯಕತ್ವ ಬದಲಾವಣೆ ಚರ್ಚೆಗೆ ಯಡಿಯೂರಪ್ಪ ಇತಿಶ್ರೀ

ಸಭೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಎಸ್.ಟಿ. ಸೋಮಶೇಖರ್, ಶಾಸಕ ಅಶ್ವಿನ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿ ಮತ್ತಿತರರು ಭಾಗವಹಿಸಿದ್ದರು. ಪೂರ್ವಭಾವಿ ಸಭೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಡುಕುತೊರೆ ಹೆಲಿಪ್ಯಾಡ್‍ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದರು.

ಬೆಂಗಳೂರಿಗೆ ನಿವಾರ್ ಚಂಡಮಾರುತ ಬಂದರೆ ಯಾರೂ ತಡೆಯೋಕಾಗಲ್ಲ: ಮೈಸೂರಿನಲ್ಲಿ ಸಿಎಂ ಹೇಳಿಕೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ