ಆ್ಯಪ್ನಗರ

ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ತನ್ವೀರ್ ಸೇಠ್ ಡಿಸ್ಚಾರ್ಜ್

ಕೊಲೆ ಯತ್ನದಿಂದ ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ತನ್ವೀರ್ ಸೇಠ್ ಡಿಸ್ಚಾರ್ಜ್ ಆಗಿದ್ದಾರೆ. ನೆವೆಂಬರ್ 17 ರಂದು ರಾತ್ರಿ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು.

Vijaya Karnataka Web 26 Nov 2019, 7:07 am
ಮೈಸೂರು: ಕೊಲೆ ಯತ್ನದಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಡಿಸ್ಚಾರ್ಜ್ ಆಗಿದ್ದಾರೆ. ದುಷ್ಕರ್ಮಿಯ ಮಚ್ಚಿನೇಟಿನಿಂದ ಗಾಯಗೊಂಡಿದ್ದ ತನ್ವೀರ್ ಸೇಠ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬಳಿಕ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು.
Vijaya Karnataka Web congress mla tanveer sait discharge form hospital
ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ತನ್ವೀರ್ ಸೇಠ್ ಡಿಸ್ಚಾರ್ಜ್


ತನ್ವೀರ್ ಸೇಠ್ ಬಳಿಕ ‘ಹಿಟ್ ಲಿಸ್ಟ್‌ನಲ್ಲಿ’ ಯು.ಟಿ ಖಾದರ್‌ ! ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಭದ್ರತೆ

ಇದೀಗ ನಾಲ್ಕು ದಿನಗಳ ಕಾಲ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಿದ ಬಳಿಕ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಆಸ್ಪತ್ರೆಯಿಂದ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು.

ನೆವೆಂಬರ್ 17 ರಂದು ತನ್ವೀರ್ ಸೇಠ್ ಮೇಲೆ ಎಸ್‌ಡಿಪಿಐ ಕಾರ್ಯಕರ್ತ ಫರ್ಹಾನ್ ಪಾಷಾ ಎಂಬಾತ ಕೊಲೆ ಯತ್ನ ನಡೆಸಿದ್ದ. ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಾಸಕ ತನ್ವೀರ್ ಸೇಠ್ ಪ್ರಾಣಾಪಾಯದಿಂದ ಪಾರು; ಆರೋಪಿಗಳಿಗೆ ಮುಂದುವರಿದ ಶೋಧ

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿ ಫರ್ಹಾನ್ ಪಾಷಾನನ್ನು ಬಂಧಿಸಿದ್ದು ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಸೈದ್ದಾಂತಿಕ ಹಾಗೂ ರಾಜಕೀಯ ಕಾರಣಕ್ಕಾಗಿ ಈ ಹತ್ಯೆಯ ಯತ್ನ ನಡೆದಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಶಾಸಕ ತನ್ವೀರ್ ಸೇಠ್‌ಗೆ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ