ಆ್ಯಪ್ನಗರ

ಮೈಸೂರಿನ ಪಾರಂಪರಿಕ ಕಟ್ಟಡ ನೆಲಸಮ ಕುರಿತು ಕೋರ್ಟ್ ನಿರ್ದೇಶನದಂತೆ ತೀರ್ಮಾನ: ಗುರುದತ್ತ ಹೆಗ್ಡೆ

ಶತಮಾನಗಳ ಮೈಸೂರಿನ ಪಾರಂಪರಿಕ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ ಡೌನ್‌ ನೆಲ ಸಮಗೊಳಿಸುವ ವಿಚಾರದ ಕುರಿತು ನ್ಯಾಯಾಲಯದ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಪಾಲಿಕೆ ಆಯುಕ್ತ ಗುರುದತ್ತ ಹೆಗ್ಡೆ ಹೇಳಿದ್ದಾರೆ.

Vijaya Karnataka Web 14 Jan 2020, 2:44 pm
ಮೈಸೂರು: ಶತಮಾನಗಳ ಮೈಸೂರಿನ ಪಾರಂಪರಿಕ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ ಡೌನ್‌ ನೆಲ ಸಮಗೊಳಿಸುವ ವಿಚಾರದ ಕುರಿತು ನ್ಯಾಯಾಲಯದ ನಿರ್ದೇಶನದ ಮೇರೆಗೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಮೈಸೂರು ಪಾಲಿಕೆ ಆಯುಕ್ತ ಗುರುದತ್ತ ಹೆಗ್ಡೆ ಹೇಳಿದ್ದಾರೆ.
Vijaya Karnataka Web mysuru devaraja market


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಾರುಕಟ್ಟೆಯನ್ನು ನೆಲ ಸಮಗೊಳಿಸಿ ಪುನರ್ ನಿರ್ಮಿಸಲು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ನಿರ್ಣಯಿಸಲಾಗಿದೆ. ಈಗಾಗಲೇ ಪಾಲಿಕೆ ನಿರ್ಣಯ ವಿರೋಧಿಸಿ ದೇವರಾಜ ಮಾರುಕಟ್ಟೆಯ ವರ್ತಕರ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಇನ್ನು ಈ ಕುರಿತು ಇಬ್ಬರ ವಾದ ಆಲಿಸಿದ್ದ ನ್ಯಾಯಾಲಯ ಈ ಕುರಿತು ತಜ್ಞರ ಸಮಿತಿ ರಚಿಸಿ ಮಾರುಕಟ್ಟೆ ಸ್ಥಿತಿಗತಿ ಬಗ್ಗೆ 6 ತಿಂಗಳಲ್ಲಿ ವರದಿ ನೀಡುವಂತೆ ಪಾಲಿಕೆಗೆ ಸೂಚನೆ ಸಹ ನೀಡಿತ್ತ. ಆದ್ದರಿಂದ ತಜ್ಞರ ಸಮಿತಿ ಕೂಡ ದೇವರಾಜ ಮಾರುಕಟ್ಟೆ ಕೆಡವಿ ಪುನರ್ ನಿರ್ಮಾಣ ಮಾಡುವಂತೆ ವರದಿ ಹೊರತಂದಿದೆ. ಈ ಕುರಿತು ವರದಿಯನ್ನು ನ್ಯಾಯಾಲಯದ ಮುಂದಿಡುತ್ತೇವೆ. ನಾವು ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಲ್ಲಾ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಈಗಾಗಲೇ ಶಿಥಿಲಾವಸ್ಥೆಯಲ್ಲಿರುವ ಪಾರಂಪರಿಕ ದೇವರಾಜ ಮಾರುಕಟ್ಟೆಯನ್ನು ಕೆಡವಿ ಪುನರ್ ನಿರ್ಮಾಣ ಮಾಡಬೇಕೆಂಬುದು ಮಹಾನಗರ ಪಾಲಿಕೆಯ ಉದ್ದೇಶವಾಗಿದೆ. ಪಾರಂಪರಿಕ ಮಾದರಿಯಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕಿದೆ ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ