ಆ್ಯಪ್ನಗರ

ಚುನಾವಣೆಗೆ ಬಿಗಿಭದ್ರತೆ: 36 ಮಂದಿ ಗಡಿಪಾರು

ಚುನಾವಣೆ ಹಿನ್ನೆಲೆಯಲ್ಲಿ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕ ಭದ್ರತೆ ಮಾಡಲಾಗಿದ್ದು, 36 ಮಂದಿಯನ್ನು ಗಡಿಪಾರು ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸ್‌ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Vijaya Karnataka 16 Apr 2019, 5:00 am
ಮೈಸೂರು : ಚುನಾವಣೆ ಹಿನ್ನೆಲೆಯಲ್ಲಿ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕ ಭದ್ರತೆ ಮಾಡಲಾಗಿದ್ದು, 36 ಮಂದಿಯನ್ನು ಗಡಿಪಾರು ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸ್‌ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Vijaya Karnataka Web cunavanege bigibhadrate 36 mandi gadiparu
ಚುನಾವಣೆಗೆ ಬಿಗಿಭದ್ರತೆ: 36 ಮಂದಿ ಗಡಿಪಾರು


ಒಟ್ಟು 37 ಪ್ರಕರಣಗಳನ್ನು ವಿಚಾರಣೆ ನಡೆಸಲಾಗಿದ್ದು, ಅದರಲ್ಲಿ 36 ಮಂದಿಯನ್ನು ಗಡಿಪಾರು ಮಾಡಲಾಗಿದೆ. 17 ಮಂದಿಯನ್ನು ಬೇರೆ ಠಾಣೆ ವ್ಯಾಪ್ತಿಗೆ ಹಾಗೂ 19 ಮಂದಿಯನ್ನು ಬೇರೆ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದರು.

ನಗರ ಪೊಲೀಸ್‌ ಆಯುಕ್ತ ಕೆ.ಟಿ.ಬಾಲಕೃಷ್ಣ ಮಾತನಾಡಿ, ನಗರ ವ್ಯಾಪ್ತಿಯಲ್ಲಿ 8 ಮಂದಿ ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದೆ. ಮೂರು ಹಂತದಲ್ಲಿ ಚುನಾವಣೆಗೆ ಭದ್ರತೆ ಒದಗಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ 968 ಮತಗಟ್ಟೆಗಳಿದ್ದು, ಅವುಗಳಲ್ಲಿ ಬಂದೋಬಸ್ತ್‌ಗೆ 1562 ಮಂದಿಯನ್ನು ನೇಮಿಸಲಾಗಿದೆ. 59 ಮೊಬೈಲ್‌ ಸೆಕ್ಟರ್‌ಗಳು, 20 ಸೂಪರ್‌ವೈಸ್‌ ತಂಡ, 6 ಸಬ್‌ ಡಿವಿಷನ್‌ ಸೂಪರ್‌ವೈಸ್‌ ತಂಡಗಳು ಕಾರ್ಯನಿರ್ವಹಿಸಲಿವೆ. ಸಿವಿಲ್‌, ಸಿಆರ್‌ಪಿಎಫ್‌ನ 2 ತುಕಡಿ, ಕೆಎಸ್‌ಆರ್‌ಪಿ 4 ತುಕಡಿ, 20 ಜಿಲ್ಲಾ ಸಶಸ್ತ್ರ ಪಡೆ, ಅಶ್ವದಳ ಸೇರಿದಂತೆ ಒಟ್ಟು 3159 ಮಂದಿಯನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ. 250 ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗುವುದು. 7 ಅತಿಸೂಕ್ಷ್ಮ ವಲಯಗಳನ್ನು ಗುರುತಿಸಲಾಗಿದೆ. ಮತದಾರರು ಧೈರ್ಯದಿಂದ ಮತ ಚಲಾಯಿಸುವಂತೆ ರೂಟ್‌ಮಾರ್ಚ್‌, ಸಭೆಗಳನ್ನು ಆಯೋಜಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ಸಿಂಗ್‌ ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿ 1953 ಬೂತ್‌ಗಳಿದ್ದು, ಸುಮಾರು 3 ಸಾವಿರ ಮಂದಿಯನ್ನು ಭದ್ರತೆಗೆ ಬಳಸಿಕೊಳ್ಳಲಾಗಿದೆ. ಚೆಕ್‌ಪೋಸ್ಟ್‌ಗಳನ್ನು ಬಲಪಡಿಸಲಾಗಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಕೇಂದ್ರಗಳಲ್ಲಿ ವಿಶೇಷ ಭದ್ರತೆ ಒದಗಿಸಲಾಗುವುದು. ಜಿಲ್ಲಾ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಗೊಳಿಸಿದ ನಂತರ 40,97,120 ರೂ. ನಗದು, 208 ಲೀಟರ್‌ ಮದ್ಯ ವಶಪಡಿಸಿಕೊಂಡು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ