ಆ್ಯಪ್ನಗರ

​ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ

ಕೇಂದ್ರ ಸರಕಾರದ ನಗರ ಬಡತನ ನಿರ್ಮೂಲನಾ ಮಂತ್ರಾಲಯದ ಪ್ರಾಯೋಜಿತ ‘ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆ’ (ನಲ್ಮ್)ನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಪತ್ರ ವಿತರಣೆ ಮಾಡಲಾಯಿತು.

ವಿಕ ಸುದ್ದಿಲೋಕ 3 Feb 2017, 5:15 am
ಮೈಸೂರು: ಕೇಂದ್ರ ಸರಕಾರದ ನಗರ ಬಡತನ ನಿರ್ಮೂಲನಾ ಮಂತ್ರಾಲಯದ ಪ್ರಾಯೋಜಿತ ‘ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆ’ (ನಲ್ಮ್)ನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಪತ್ರ ವಿತರಣೆ ಮಾಡಲಾಯಿತು.
Vijaya Karnataka Web distribution of identity cards to merchants on the street side
​ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ


ಪಾಲಿಕೆ ಆವರಣದಲ್ಲಿ ಗುರುವಾರ ನಡೆದ ಕಾರ‌್ಯಕ್ರಮದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಪತ್ರ ವಿತರಣೆ ಮಾಡಿ ಮಾತನಾಡಿದ ಮೇಯರ್ ಎಂ. ಜೆ. ರವಿಕುಮಾರ್, ಬೀದಿಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ನಲ್ಮ್ ಯೋಜನೆಯಡಿ ಗುರುತಿನ ಚೀಟಿಯನ್ನು ವಿತರಣೆ ಮಾಡಲಾಗುತ್ತಿದೆ. ಬೀದಿ ಬದಿ ವ್ಯಾಪಾರಿಗಳು ವ್ಯಾಪಾರದ ಸಮಯದಲ್ಲಿ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕು. ಸ್ವಚ್ಚತೆ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಅಂಥ ಬೀದಿ ಬದಿ ಅಂಗಡಿ ಗಳನ್ನು ತೆರವು ಮಾಡಲಾಗುವುದು ಎಂದು ಎಚ್ಚರಿಸಿದರು.

ಮೈಸೂರು ಪಾಲಿಕೆ ವ್ಯಾಪ್ತಿಯಲ್ಲಿ 1,303 ಬೀದಿಬದಿ ವ್ಯಾಪಾರಿಗಳಿದ್ದು, ಗುರುವಾರ ಒಟ್ಟು 630 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ