ಆ್ಯಪ್ನಗರ

ಬೆಮೆಲ್ ಸಂಸ್ಥೆಯ‌ ಖಾಸಗೀಕರಣಕ್ಕೆ ನೌಕರರಿಂದ ವಿರೋಧ

ಕೇಂದ್ರ ಸರಕಾರವು ಬೆಮೆಲ್‌ ಸಂಸ್ಥೆಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿರುವುದನ್ನು ಖಂಡಿಸಿ ಭಾರತ್‌ ಅರ್ಥ್‌ ಮೂವರ್ಸ್‌ ಎಂಪ್ಲಾಯಿಸ್‌ ಅಸೋಸಿಯೇಷನ್‌ ವತಿಯಿಂದ ಪ್ರತಿಭಟನಾ ಸಭೆ ನಡೆಸಲಾಯಿತು.

Vijaya Karnataka Web 18 Jan 2021, 11:21 pm
ಮೈಸೂರು: ಕೇಂದ್ರ ಸರಕಾರವು ಬೆಮೆಲ್‌ ಸಂಸ್ಥೆಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿರುವುದನ್ನು ಖಂಡಿಸಿ ಭಾರತ್‌ ಅರ್ಥ್‌ ಮೂವರ್ಸ್‌ ಎಂಪ್ಲಾಯಿಸ್‌ ಅಸೋಸಿಯೇಷನ್‌ ವತಿಯಿಂದ ಪ್ರತಿಭಟನಾ ಸಭೆ ನಡೆಸಲಾಯಿತು.
Vijaya Karnataka Web BEML
According to officials of the Bengaluru-headquartered BEML, the company has achieved indigenisation levels of over 90 per cent in the mainline mining & construction products and rail coaches & EMUs, over 80 per cent in high mobility vehicles and over 65 per cent in Metro cars.


ಸೋಮವಾರ ಬೆಮಲ್‌ ಸಂಸ್ಥೆ ಎದುರು ಜಮಾವಣೆಗೊಂಡ ಅಸೋಸಿಯೇಷನ್‌ ಸದಸ್ಯರು ಕೇಂದ್ರ ಸರಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೆಮೆಲ್‌ ಖಾಸಗೀಕರಣಕ್ಕೆ ಕೇಂದ್ರ ಸಮರ್ಥನೆ

ಈ ಸಂದರ್ಭ ಅಸೋಸಿಯೇಷನ್‌ ಅಧ್ಯಕ್ಷ ಎಚ್‌.ವೈ.ಮುನಿರೆಡ್ಡಿ ಮಾತನಾಡಿ, ರಕ್ಷಣಾ ಮಂತ್ರಿ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಿ ಖಾಸಗೀಕರಣ ಮಾಡದಂತೆ ಮನವಿ ಪತ್ರವನ್ನು ಸಲ್ಲಿಸಲಾಗಿದೆ. ಯಾವುದೆ ಕಾರಣಕ್ಕೂ ಬೆಮೆಲ್‌ ಸಂಸ್ಥೆಯನ್ನು ಖಾಸಗೀಕರಣ ಮಾಡಲು ಬಿಡುವುದಿಲ್ಲ.

ಬಿಇಎಂಎಲ್‌ ಖಾಸಗೀಕರಣ ಸನ್ನಿಹಿತ

ಖಾಸಗೀಕರಣ ಮಾಡಿದರೆ ಮುಂದಿನ ದಿನಗಳಲ್ಲಿಉಗ್ರ ಹೋರಾಟ ಮಾಡಲಾಗುವುದು ಎಂದರು. ಪ್ರತಿಭಟನಾ ಸಭೆಯಲ್ಲಿ ಅಸೋಸಿಯೇಷನ್‌ ಪ್ರಧಾನ ಕಾರ್ಯದರ್ಶಿ ಎಂ.ಡಿ.ರಾಜಶೇಖರ್‌ ಮೂರ್ತಿ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಬೆಮೆಲ್‌ ಕಾರ್ಖಾನೆಯಲ್ಲಿ ವಿಪತ್ತು ನಿರ್ವಹಣಾ ತಂಡದಿಂದ ಅಣುಕು ಪ್ರದರ್ಶನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ