ಆ್ಯಪ್ನಗರ

ಎಲ್ಲವನ್ನೂ ಪಕ್ಷ ನಿರ್ಧರಿಸುತ್ತದೆ: ಈಶ್ವಪ್ಪ

ಯಾರು ಸಚಿವರಾಗಬೇಕು, ಸಂಪುಟ ಹೇಗಿರಬೇಕು ಎನ್ನುವುದನ್ನು ಪಕ್ಷವೇ ನಿರ್ಧರಿಸುತ್ತದೆ. ತಮಗೆ ಯಾವ ಜವಾಬ್ದಾರಿ ನೀಡಿದರೂ ಅದನ್ನು ನಿರ್ವಹಿಸಲು ಸಿದ್ಧವಿರುವುದಾಗಿ ಬಿಜೆಪಿ ಮುಖಂಡ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

Vijaya Karnataka 25 Jul 2019, 5:00 am
ಮೈಸೂರು: ಯಾರು ಸಚಿವರಾಗಬೇಕು, ಸಂಪುಟ ಹೇಗಿರಬೇಕು ಎನ್ನುವುದನ್ನು ಪಕ್ಷವೇ ನಿರ್ಧರಿಸುತ್ತದೆ. ತಮಗೆ ಯಾವ ಜವಾಬ್ದಾರಿ ನೀಡಿದರೂ ಅದನ್ನು ನಿರ್ವಹಿಸಲು ಸಿದ್ಧವಿರುವುದಾಗಿ ಬಿಜೆಪಿ ಮುಖಂಡ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.
Vijaya Karnataka Web everything is decided by the party eshwappa
ಎಲ್ಲವನ್ನೂ ಪಕ್ಷ ನಿರ್ಧರಿಸುತ್ತದೆ: ಈಶ್ವಪ್ಪ


ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಲು ಆಗಮಿಸಿದ ಸಂದರ್ಭ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

''ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಶೀಘ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಚಿವ ಸಂಪುಟ ಕುರಿತು ಪಕ್ಷವೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದು, ಎಲ್ಲರೂ ಅದಕ್ಕೆ ಬದ್ಧರಾಗಿರುತ್ತಾರೆ. ಈ ಹಿಂದೆ ಉಪ ಮುಖ್ಯಮಂತ್ರಿಯಾಗುವಂತೆ ಪಕ್ಷ ಸೂಚಿಸಿತ್ತು. ಅದರಂತೆ ನನ್ನ ಕರ್ತವ್ಯ ಮಾಡಿದ್ದೇನೆ. ಈಗ ಯಾವ ಜವಾಬ್ದಾರಿ ನೀಡಿದರೂ ನಾನು ಸಿದ್ಧನಿದ್ದೇನೆ'' ಎಂದು ಹೇಳಿದರು.

''ಇಂದಿನ ರಾಜಕೀಯ 'ಆಚಾರ ಹೇಳೋದಕ್ಕೆ ಬದನೆಕಾಯಿ ತಿನ್ನೋದಕ್ಕೆ' ಎನ್ನುವಂತಿದೆ. ಡಿ.ಕೆ. ಶಿವಕುಮಾರ್‌ ಟ್ರಬಲ್‌ ಶೂಟರ್‌ ಎಂದು ಹೇಳಿಕೊಂಡು ರಾಕ್ಷಸಿ ಪ್ರವೃತ್ತಿ ತೋರಿಸುತ್ತಿದ್ದಾರೆ. ಜನಾದೇಶ ಇಲ್ಲದಿದ್ದರೂ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಧಿಕಾರ ಹಿಡಿದದ್ದೇ ಇಷ್ಟೆಲ್ಲ ಗೊಂದಲಕ್ಕೆ ಕಾರಣ. ಲೋಕಸಭೆ ಚುನಾವಣೆ ನಂತರವೂ ಅವರು ಸರಿದಾರಿಗೆ ಬರಲಿಲ್ಲ. ನಮ್ಮ ಸರಕಾರ ಅಧಿಕಾರಕ್ಕೆ ಬರುತ್ತಿದ್ದು, ಎಲ್ಲಾ ಗೊಂದಲ ನಿವಾರಿಸಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿದೆ'' ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ