ಆ್ಯಪ್ನಗರ

ನಕಲಿ ನಿವೇಶನ ಪ್ರಕರಣ ದಾಖಲು

ನಕಲಿ ದಾಖಲೆ ಸೃಷ್ಟಿಸಿ ಮುಡಾ ನಿವೇಶನ ಮಾರಾಟ ಮಾಡಿದ್ದ ವ್ಯಕ್ತಿಯ ವಿರುದ್ಧ ಕುವೆಂಪುನಗರ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

Vijaya Karnataka 30 Dec 2019, 5:00 am
ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಮುಡಾ ನಿವೇಶನ ಮಾರಾಟ ಮಾಡಿದ್ದ ವ್ಯಕ್ತಿಯ ವಿರುದ್ಧ ಕುವೆಂಪುನಗರ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.
Vijaya Karnataka Web MUDA-2


ನಕಲಿ ದಾಖಲೆ ಸೃಷ್ಟಿಸಿದ ವೆಂಕಟೇಶ್‌ ಸೇರಿದಂತೆ ಎಂ.ಬಿ.ವಿಠಲ್‌, ಸೀತಾದೇವಿ ಮತ್ತು ಡಿ.ಹಾಪುರಾಮ್‌ ಚೌಧರಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

ವಿದ್ಯಾರಣ್ಯಪುರಂ ಬಡಾವಣೆಯಲ್ಲಿನ ಮುಡಾದ 35*40 ಅಳತೆಯ ನಿವೇಶನವನ್ನು ವೆಂಕಟೇಶ್‌ ಎಂಬುವರು ನಕಲಿ ದಾಖಲೆ ಸೃಷ್ಟಿಸಿ ಎಂ.ಬಿ.ವಿಠಲ್‌ ಎಂಬುವರಿಗೆ ಮಾರಾಟ ಮಾಡಿದ್ದು, ಅವರು ಅದನ್ನು ಸೀತಾದೇವಿ ಮತ್ತು ಡಿ.ಹಾಪುರಾಮ್‌ಚೌಧರಿ ಎಂಬುವರಿಗೆ ಮಾರಾಟ ಮಾಡಿದ್ದಾರೆ. ಇವರಿಬ್ಬರು ಸ್ಥಳದಲ್ಲಿಕಟ್ಟಡ ನಿರ್ಮಿಸುತ್ತಿದ್ದು, ಈ ಬಗ್ಗೆ ಮುಡಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ನಕಲಿ ದಾಖಲೆ ಇರುವುದು ಕಂಡು ಬಂದಿದೆ.

ಈ ಸಂಬಂಧ ಮುಡಾ ವಲಯ ಅಧಿಕಾರಿ ಭಾಸ್ಕರ್‌ ಅವರು ಈ ನಾಲ್ವರ ವಿರುದ್ಧ ಕುವೆಂಪು ನಗರ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ