ಆ್ಯಪ್ನಗರ

ಕೆರೆಗೆ ಜಾರಿ ಬಿದ್ದು ವ್ಯಕ್ತಿ ಸಾವು

ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ.

Vijaya Karnataka 10 Nov 2017, 5:00 am

ಮೈಸೂರು: ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ.

ಚಾಮುಂಡಿಬೆಟ್ಟದ ತಪ್ಪಲಿನ ಉತ್ತನಹಳ್ಳಿ ರಸ್ತೆಯಲ್ಲಿರುವ ಪರಶುರಾಯನ ಕೆರೆಯಲ್ಲಿ ಈ ಘಟನೆ ಸಂಭವಿಸಿದೆ. ಕೈಲಾಸಪುರಂನ ನಿವಾಸಿ, ಎಪಿಎಂಸಿಯ ಕೂಲಿ ಕಾರ್ಮಿಕ ಕೆ.ಆರ್‌. ಗಣೇಶ್‌(30) ಮೃತರು. ಇವರು ಗುರುವಾರ ಬೆಳಗ್ಗೆ ಕೆರೆ ಕಡೆಗೆ ಬಹಿರ್ದೆಸೆಗೆ ತೆರಳಿದ್ದು, ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Vijaya Karnataka Web fallen to lake person dead
ಕೆರೆಗೆ ಜಾರಿ ಬಿದ್ದು ವ್ಯಕ್ತಿ ಸಾವು


ಗಣೇಶ್‌ ನೀರಿನಲ್ಲಿ ಬಿದ್ದದ್ದನ್ನು ಕಂಡ ಸಾರ್ವಜನಿಕರೊಬ್ಬರು ತಕ್ಷಣ ಕೆ.ಆರ್‌.ಠಾಣೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಎರಡು ತಾಸು ಕಾರ್ಯಾಚರಣೆ ನಡೆಸಿ, ಕೆರೆಯ ಹೂಳಿನಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರ ತೆಗೆದರು. ಕೆ.ಆರ್‌. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಯಿತು. ಕೆ.ಆರ್‌. ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ