ಆ್ಯಪ್ನಗರ

ರೈತ ಆತ್ಮಹತ್ಯೆ ಯತ್ನ: ಆಸ್ಪತ್ರೆಗೆ ದಾಖಲು

ಕಬ್ಬಿಗೆ ಬೆಂಕಿ ಬಿದ್ದು ನಷ್ಟವಾದರೂ ಯಾವುದೇ ಅಧಿಕಾರಿಗಳು ಭೇಟಿ ನೀಡಿ ಸಾಂತ್ವನ ಹೇಳದ ಹಿನ್ನೆಲೆಯಲ್ಲಿ ಹಾಗೂ ಸಕಾಲದಲ್ಲಿ ಕಬ್ಬು ಕಟಾವಾಗದ ಕಾರಣದಿಂದ ಮನನೊಂದು ವಿಷ ಸೇವಿಸಿದ್ದ ರೈತರೊಬ್ಬರು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Vijaya Karnataka 10 Jul 2019, 5:00 am
ಕೆ.ಆರ್‌.ಪೇಟೆ: ಕಬ್ಬಿಗೆ ಬೆಂಕಿ ಬಿದ್ದು ನಷ್ಟವಾದರೂ ಯಾವುದೇ ಅಧಿಕಾರಿಗಳು ಭೇಟಿ ನೀಡಿ ಸಾಂತ್ವನ ಹೇಳದ ಹಿನ್ನೆಲೆಯಲ್ಲಿ ಹಾಗೂ ಸಕಾಲದಲ್ಲಿ ಕಬ್ಬು ಕಟಾವಾಗದ ಕಾರಣದಿಂದ ಮನನೊಂದು ವಿಷ ಸೇವಿಸಿದ್ದ ರೈತರೊಬ್ಬರು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
Vijaya Karnataka Web farmers suicide attempt hospitalization
ರೈತ ಆತ್ಮಹತ್ಯೆ ಯತ್ನ: ಆಸ್ಪತ್ರೆಗೆ ದಾಖಲು


ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಆಲಂಬಾಡಿಕಾವಲು ಗ್ರಾಮದ ರೈತ ರೇವಣ್ಣಗೌಡ ಆತ್ಮಹತ್ಯೆಗೆ ಯತ್ನಿಸಿದವರು.

ಮೂರು ದಿನಗಳ ಹಿಂದೆ ತನ್ನ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಲಕ್ಷಾಂತರ ರೂ. ನಷ್ಟವಾಗಿತ್ತು. ಆಗ ಯಾವುದೇ ಅಧಿಕಾರಿಗಳು ಭೇಟಿ ನೀಡಿ ಸಾಂತ್ವನ ಹೇಳಿರಲಿಲ್ಲ. ಅಲ್ಲದೆ ತಾಲೂಕಿನ ಮಾಕವಳ್ಳಿಯ ಕೋರಮಂಡಲ್‌ ಸಕ್ಕರೆ ಕಾರ್ಖಾನೆಯವರು ಕಬ್ಬನ್ನು ಕಟಾವು ಮಾಡಿಕೊಳ್ಳಲು ಮುಂದಾಗಲಿಲ್ಲ ಎಂದು ಮನನೊಂದ ರೈತ ರೇವಣ್ಣಗೌಡ ಅವರು ತಮ್ಮ ಜಮೀನಿನ ಬಳಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ