ಆ್ಯಪ್ನಗರ

ಬೆಂಗಳೂರನ್ನು ಮೊದಲು ಲಾಕ್‌ ಡೌನ್‌ ಮಾಡಿ: ಶಾಸಕ ಯತೀಂದ್ರ ಸಿದ್ದರಾಮಯ್ಯ

ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರನ್ನು ಮೊದಲು ಲಾಕ್‌ಡೌನ್‌ ಮಾಡಬೇಕು ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Vijaya Karnataka Web 7 Jul 2020, 6:12 pm
ಮೈಸೂರು: ರಾಜ್ಯಾದ್ಯಂತ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಎಲ್ಲೆ ಮೀರುತ್ತಿರುವುದರಿಂದ ಬೆಂಗಳೂರನ್ನು ಮೊದಲು ಲಾಕ್‌ಡೌನ್‌ ಮಾಡಬೇಕು ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
Vijaya Karnataka Web yathindra siddaramaiah


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಕಿತರ ಸಂಖ್ಯೆ ಹೆಚ್ಚುತ್ತಿದೆ. ಸೋಂಕು ತನ್ನ ಎಲ್ಲೆ ಮೀರಿ ಹಬ್ಬುತ್ತಿದೆ. ಮುಂದಿನ ದಿನಗಳಲ್ಲಿ ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುವುದು ಅನುಮಾನವಾಗಿದೆ. ಈಗಾಗಲೇ ರಾಜಧಾನಿಯಿಂದ ಗ್ರಾಮೀಣ ಭಾಗಕ್ಕೆ ಜನರು ವಲಸೆ ಹೋಗುತ್ತಿದ್ದಾರೆ. ಇದು ಸರಿಯಲ್ಲ. ಅವರಿಂದಲೂ ಸೋಂಕು ಹರಡಬಹುದಾದ ಸಾಧ್ಯತೆಗಳಿರುತ್ತದೆ. ಎಂದು ತಿಳಿಸಿದ್ದಾರೆ.

ಈ ನಡುವೆ ಮೈಸೂರಿನಲ್ಲಿಯೂ ಸೋಂಕು ಎಲ್ಲೆ ಮೀರುತ್ತಿದೆ. ತಮ್ಮ ವರುಣ ಕ್ಷೇತ್ರದಲ್ಲೂ ನಾಲ್ಕು ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ. ಈ ಬಗ್ಗೆ ಖುದ್ದು ನಾನೇ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ. ಇವೆಲ್ಲದಕ್ಕೂ ಪರಿಹಾರ ಎಂದರೇ ಬೆಂಗಳೂರನ್ನು ಕನಿಷ್ಠ ಒಂದು ವಾರಗಳ ಕಾಲ ಸಂಪೂರ್ಣ ಲಾಕ್‌ಡೌನ್‌ ಮಾಡಬೇಕು . ಆಗ ಸೋಂಕು ಕನಿಷ್ಟ ಹತೋಟಿಗಾದರೂ ಬರಬಹುದೆಂದು ಸಲಹೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ