ಆ್ಯಪ್ನಗರ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ರವಿಶಂಕರ್ ಪ್ರಸಾದ್‌ಗೆ ತಿರುಗೇಟು ನೀಡಿದ ಸಿಎಂ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ತಿರುಗೇಟು ನೀಡಿದ್ದಾರೆ.

Vijaya Karnataka 10 Sep 2017, 3:14 pm
ಮೈಸೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ತಿರುಗೇಟು ನೀಡಿದ್ದಾರೆ.
Vijaya Karnataka Web gauri lankesh murder case cm taunts ravi shankar prasad
ಗೌರಿ ಲಂಕೇಶ್ ಹತ್ಯೆ ಪ್ರಕರಣ: ರವಿಶಂಕರ್ ಪ್ರಸಾದ್‌ಗೆ ತಿರುಗೇಟು ನೀಡಿದ ಸಿಎಂ


ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ಬೆದರಿಕೆ ಇದ್ದ ಕುರಿತು ರಾಜ್ಯ ಸರಕಾರಕ್ಕೆ ಮಾಹಿತಿ ಇರಲಿಲ್ಲ. ಬೆದರಿಕೆ ಬಗ್ಗೆ ಗೊತ್ತಿದ್ದರು ರಾಜ್ಯ ಸರಕಾರ ಏನು ಮಾಡುತ್ತಿತ್ತು ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಪ್ರಶ್ನಿಸಿರುವುದು ಬೇಜವಾಬ್ದಾರಿಯ ಹೇಳಿಕೆ. ಗೌರಿ ಲಂಕೇಶ್ ಅವರಿಗೆ ಬೆದರಿಕೆ ಇದ್ದ ಬಗ್ಗೆ ಸರಕಾರದ ಗಮನಕ್ಕೆ ತಂದಿದ್ದರೆ ಭದ್ರತೆ ನೀಡುತ್ತಿದ್ದೆವು. ಹತ್ಯೆಯ ಬಗ್ಗೆ ಈಗ ಏನು ಹೇಳಲು ಸಾಧ್ಯವಿಲ್ಲ ಎಂದರು.

ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯಕ್ಕೆ ಮಾನ್ಯತೆ ನೀಡುವ ಸಂಬಂಧ ದೆಹಲಿಗೆ ತೆರಳಿದಾಗ ಯುಜಿಸಿ ಅಧಿಕಾರಿಗಳ ಜೊತೆ ಮಾತನಾಡಲಾಗುವುದು ಎಂದು ಭರವಸೆ ನೀಡಿದ ಅವರು, ಮುಕ್ತ ಮುಕ್ತ ವಿವಿಗೆ ಮಾನ್ಯತೆ ನೀಡುವ ಸಂಬಂಧ ಪ್ರಧಾನಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಮಾನ್ಯತೆ ಸಿಗದೆ ಇರಲು ಸರಕಾರದ ಯಾವುದೇ ತಪ್ಪಿಲ್ಲ. ಹಿಂದಿನ ಕುಲಪತಿಗಳ ತಪ್ಪಿನಿಂದ ಸಮಸ್ಯೆ ಉಂಟಾಗಿದೆ ಎಂದು ಹೇಳಿದರು.

ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗಿರುವ ಮಳೆ ಅನಾಹುತ, ಕೆರೆ ಒತ್ತುವರಿಗೆ ಕಾಂಗ್ರೆಸ್ ಸರಕಾರವೇ ಕಾರಣ ಎನ್ನುವ ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ ಕುಮಾರ್ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಕಳೆದ ೫ ವರ್ಷದಲ್ಲಿ ಬಿಜೆಪಿಯವರೇನು ಏನು ಮಾಡಿದ್ದರು?.. ನಮ್ಮ ಸರಕಾರ ರಾಜಕಾಲುವೆ ತೆರವಿಗೆ ಕ್ರಮ ವಹಿಸಿದೆ ಎಂದು ತಿರುಗೇಟು ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ