ಆ್ಯಪ್ನಗರ

ಹಳೇ ಮೈಸೂರು ಭಾಗದ ದಲಿತ ಶಾಸಕರಿಗೆ ಸಚಿವ ಸ್ಥಾನ ನೀಡಿ: ಶಾಸಕ ಹರ್ಷವರ್ಧನ್‌ ಆಗ್ರಹ

ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಚರ್ಚೆ ಜೋರಾಗಿರುವ ಬೆನ್ನಲ್ಲಿಯೇ ಎಲ್ಲ ಕಡೆಯಿಂದಲೂ ಸಚಿವ ಸ್ಥಾನಕ್ಕಾಗಿ ಲಾಬಿ ಶುರುವಾಗಿದೆ. ಈಗ ಹಳೇ ಮೈಸೂರು ಭಾಗದ ಶಾಸಕರಿಗೆ ಸಚಿವ ಸ್ಥಾನ ನೀಡಿ ಎಂದು ನಂಜನಗೂಡು ಶಾಸಕ ಬಿ ಹರ್ಷವರ್ಧನ್‌ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.

Vijaya Karnataka Web 26 Nov 2020, 5:01 pm
ಮೈಸೂರು: ಹಳೇ ಮೈಸೂರು ಪ್ರಾಂತ್ಯದ ಶಾಸಕರೊಬ್ಬರಿಗೆ ಸಚಿವ ಸ್ಥಾನ ನೀಡಿ. ಇಲ್ಲವಾದರೆ ಕೇಂದ್ರದಲ್ಲಿ ಶ್ರೀನಿವಾಸ್‌ ಪ್ರಸಾದ್‌ ಅವರಿಗೆ ಮಂತ್ರಿ ಸ್ಥಾನ ಕೊಡಿ ಎಂದು ನಂಜನಗೂಡು ಶಾಸಕ ಹರ್ಷವರ್ಧನ್‌ ಆಗ್ರಹಿಸಿದ್ದಾರೆ.
Vijaya Karnataka Web B HARSHAVARDHAN


ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇ ಮೈಸೂರಿನಲ್ಲಿ ದಲಿತ ಶಾಸಕರಿಗೆ ಸಚಿವ ಸ್ಥಾನ ನೀಡಿ ಅನ್ನುವುದು ನನ್ನ ಮನವಿ. ಅದು ನನಗಾದರೂ ಸರಿ, ಬೇರೆ ಯಾರಿಗಾದರೂ ಸರಿ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಹಳೇ ಮೈಸೂರು ಭಾಗದ ದಲಿತ ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗಲಿಲ್ಲ ಅಂದರೆ ಕೇಂದ್ರದಲ್ಲಿ ಶ್ರೀನಿವಾಸ್ ಪ್ರಸಾದ್‌ ಅವರಿಗೆ ಮಂತ್ರಿ ಸ್ಥಾನ ನೀಡಲಿ. ಸಮುದಾಯದ ಪರವಾಗಿ ಮನವಿ ಮಾಡುವುದು ನನ್ನ ಕರ್ತವ್ಯ. ಈ ಸಂಬಂಧ ಸಿಎಂಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪ ಅವರ ಸ್ಥಿತಿ ಮುಳ್ಳಿನ ಮೇಲಿನ ಬಟ್ಟೆಯಂತೆ, ಹುಷಾರಾಗಿರಲಿ: ಶ್ರೀನಿವಾಸ್‌ ಪ್ರಸಾದ್‌

ಇನ್ನು, ಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡುವ ಅವಕಾಶ ಇದ್ದರೆ ಅವರಿಗೂ ನೀಡಲಿ ಎಂದು ಹರ್ಷವರ್ಧನ್‌ ಹೇಳಿದ್ದಾರೆ. ಉಪಚುನಾವಣೆ ಫಲಿತಾಂಶ ಬಂದ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಜೋರಾಗಿದೆ. ಸಂಪುಟ ಪುನಾರಚನೆಗೆ ಸಿಎಂ ಒಲವು ವ್ಯಕ್ತಪಡಿಸಿದ್ದರೆ, ಹೈಕಮಾಂಡ್‌ ಮಾತ್ರ ಯಾವುದಕ್ಕೂ ಗ್ರೀನ್‌ ಸಿಗ್ನಲ್‌ ನೀಡಿಲ್ಲ.

ಬೀದರ್‌-ಶ್ರೀರಂಗಪಟ್ಟಣ ರೈಲ್ವೆ ಕಾರಿಡಾರ್‌ ನಿರ್ಮಾಣ..! ಪ್ರವಾಸೋದ್ಯಮ, ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ

ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವೆ ತಿಕ್ಕಾಟ ನಡೆಯುತ್ತಿದ್ದು, ಪ್ರಾದೇಶಿಕವಾರು ಹಂಚಿಕೆ ಬಗ್ಗೆಯೂ ಕೂಗು ಕೇಳಿಬರುತ್ತಿದೆ. ಈ ವಾರಾಂತ್ಯದೊಳಗೆ ಸಂಪುಟಕ್ಕೆ ಸರ್ಜರಿ ಆಗುವ ಸಾಧ್ಯತೆಯಿದ್ದು, ಯಾರ‍್ಯಾರಿಗೆ ಅದೃಷ್ಟ ಕುಲಾಯಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಮುಂದಿನ ಎರಡೂವರೆ ವರ್ಷವೂ ನಾನೇ ಸಿಎಂ: ನಾಯಕತ್ವ ಬದಲಾವಣೆ ಚರ್ಚೆಗೆ ಯಡಿಯೂರಪ್ಪ ಇತಿಶ್ರೀ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ