ಆ್ಯಪ್ನಗರ

ದಸರಾಗೆ 25 ಕೋಟಿ ರೂ. ಅನುದಾನಕ್ಕೆ ಮನವಿ

ಈ ಬಾರಿಯ ಮೈಸೂರು ದಸರಾಕ್ಕೆ ಸರಕಾರಕ್ಕೆ 25 ಕೋಟಿ ರೂ. ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು.​

Vijaya Karnataka Web 14 Sep 2018, 4:19 pm
ಮೈಸೂರು: ಈ ಬಾರಿಯ ಮೈಸೂರು ದಸರಾಕ್ಕೆ ಸರಕಾರಕ್ಕೆ 25 ಕೋಟಿ ರೂ. ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು.
Vijaya Karnataka Web First batch of Dasara elephants enter the Mysore Palace ahead of the Mys...


ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ದಸರಾ- 2018 ಕಾರ್ಯಕಾರಿ ಸಮಿತಿಯ ಸಭೆ ಬಳಿಕ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಕಳೆದ ಬಾರಿ ದಸರಾಕ್ಕೆ ನೀಡಿದ 15 ಕೋಟಿ ರೂಪಾಯಿ ಅನುದಾನ ಖರ್ಚಾಗಿದೆ. ಈ ಬಾರಿ 25 ಕೋಟಿ ರೂ. ಗೆ ಪ್ರಸ್ತಾವನೆ ಕಳುಹಿಸಲಾಗುವುದು. ವಿವಿಧ ಇಲಾಖೆಗಳ ಜತೆಗೂಡಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಈ ಬಾರಿ 16 ದಸರಾ ಉಪಸಮಿತಿ ರಚಿಸಲಾಗುವುದು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನ ಕಾರ್ಯಕರ್ತರು ಸಹಿತ 20 ರಿಂದ 25 ಮಂದಿಗೆ ಸಮಿತಿ ಒಂದಕ್ಕೆ ಅವಕಾಶ ನೀಡಲಾಗುವುದು, ಈಗಾಗಲೇ ಪಕ್ಷದ ಅಧ್ಯಕ್ಷರಿಗೆ ಕಾರ್ಯಕರ್ತರ ಪಟ್ಟಿ ಕಳಿಸಿಕೊಡಲು ತಿಳಿಸಲಾಗಿದೆ ಎಂದರು. ದಸರಾ ಕಾರ್ಯಕ್ರಮದ ಪಟ್ಟಿಯನ್ನು ಸೆಪ್ಟೆಂಬರ್ 25ಕ್ಕೆ ಅಂತಿಮಗೊಳಿಸಲಾಗುವುದು. ಸೆ. 26 ರಂದು ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು ಎಂದರು.

ಸಭೆಯಿಂದ ಹೊರನಡೆದ ಸಚಿವ ಪುಟ್ಟ ರಂಗ ಶೆಟ್ಟಿ: ಸಭೆಯಲ್ಲಿ ಸಚಿವ ಪುಟ್ಟರಂಗಶೆಟ್ಟಿ ಪೋಸ್ಟರ್‌ನಲ್ಲಿ ತಮ್ಮ ಫೋಟೋ ಹಾಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ. ಬಳಿಕ ಅವರು ಸಭೆಯಿಂದ ನಿರ್ಗಮಿಸಿದರು.

ಈ ಬಗ್ಗೆ ಸ್ಪಷ್ಟೀಕರಣ ನೀಡಿದ ಜಿ. ಟಿ. ದೇವೇಗೌಡ, ಭಾವಚಿತ್ರ ಇಲ್ಲದ ಬಗ್ಗೆ ಪುಟ್ಟರಂಗಶೆಟ್ಟಿ ಶೆಟ್ಟಿ ಗಮನಕ್ಕೆ ತಂದಿದ್ದಾರೆ. ಇದನ್ನು ಸರಿ ಪಡಿಸಲಾಗುವುದು ಎಂದರು.

ಈ ಬಾರಿ ಮೈಸೂರು, ಚಾಮರಾಜನಗರದ ಎಲ್ಲ ಸಚಿವರನ್ನು ದಸರಾ ಉಪ ಸಮಿತಿ ಉಪಾಧ್ಯಕ್ಷರನ್ನಾಗಿ ಮಾಡಲು ಅಧಿಸೂಚನೆ ಹೊರಡಿಸಲಾಗುವುದು. ಶಾಸಕ ತನ್ವೀರ್ ಸೇಠ್ ಅವರು ಬೇರೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾರಣ ಸಭೆಯಲ್ಲಿ ಭಾಗವಹಿಸಿಲ್ಲ. ಕಾಂಗ್ರೆಸ್ ಶಾಸಕ ಯತಿಂದ್ರ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ಹೇಳಿದರು.

ಈ ಬಾರಿ ಜಂಬೂ ಸವಾರಿ ಈ ಹಿಂದಿನಂತೆ ಒಂದೇ ದಿನ ಇರುತ್ತದೆ. ಆದರೆ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಲು ಭಾನುವಾರ ಒಂದು ದಿನ ಹೆಚ್ಚುವರಿ ಕಾರ್ಯಕ್ರಮ ನೀಡಲು ಅವಕಾಶ ನೀಡಲಾಗುವುದು. ಜಂಬೂಸವಾರಿಯ ರಿಹರ್ಸಲ್ ಇರುವುದಿಲ್ಲ ಎಂದರು.

ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಮಾತನಾಡಿ ಮಡಿಕೇರಿ ದಸರಾ ಆ ಯೋಜನೆ ಮಾಡುವ ಸಂಬಂಧ ಸ್ಥಳೀಯರ ಜೊತೆ ಚರ್ಚೆ ಮಾಡಲಾಗುತ್ತದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ