ಆ್ಯಪ್ನಗರ

ಕೇಂದ್ರದಿಂದ ದ್ವೇಷದ ರಾಜಕಾರಣ: ಸಿದ್ದು ಕಿಡಿ

ಕೇಂದ್ರದ ಬಿಜೆಪಿ ಸರಕಾರ ಪ್ರತಿಪಕ್ಷದ ನಾಯಕರನ್ನು ಹತ್ತಿಕ್ಕುವ ಪ್ರಯತ್ನದಲ್ಲಿ ತೊಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Vijaya Karnataka 5 Sep 2019, 5:00 am
ಮೈಸೂರು: ಕೇಂದ್ರದ ಬಿಜೆಪಿ ಸರಕಾರ ಪ್ರತಿಪಕ್ಷದ ನಾಯಕರನ್ನು ಹತ್ತಿಕ್ಕುವ ಪ್ರಯತ್ನದಲ್ಲಿ ತೊಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
Vijaya Karnataka Web hate politics from the center sidhu
ಕೇಂದ್ರದಿಂದ ದ್ವೇಷದ ರಾಜಕಾರಣ: ಸಿದ್ದು ಕಿಡಿ


ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇ.ಡಿ, ಸಿಬಿಐ, ಆದಾಯ ತೆರಿಗೆ ಇಲಾಖೆ ಸೇರಿದಂತೆ ಕೇಂದ್ರ ಸರಕಾರಿ ಸ್ವಾಮ್ಯದ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಪ್ರತಿಪಕ್ಷದ ನಾಯಕರನ್ನು ಹಣಿಯುವ ತಂತ್ರಗಾರಿಕೆ ನಡೆಸುತ್ತಾ ಬಂದಿದೆ. ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ, ರಾಜ್ಯದ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಬಂಧನ ರಾಜಕೀಯ ಪ್ರೇರಿತವಾಗಿದೆ,'' ಎಂದು ದೂರಿದರು.

''ಬಿಜೆಪಿ ನಾಯಕರು ಎಷ್ಟೇ ಕಸರತ್ತು ಮಾಡಿದರೂ ಪ್ರತಿಪಕ್ಷ ನಾಯಕರನ್ನು ಮಣಿಸಲು ಸಾಧ್ಯವಿಲ್ಲ. ಡಿ.ಕೆ.ಶಿವಕುಮಾರ್‌ ಅವರ ಪರ ರಾಜ್ಯ ಕಾಂಗ್ರೆಸ್‌ ಕಾನೂನಾತ್ಮಕವಾಗಿ ಬೆಂಬಲ ನೀಡುತ್ತದೆ,'' ಎಂದು ಹೇಳಿದರು.

ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಮಾತನಾಡಿ, ''ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪ್ರತಿಪಕ್ಷಗಳ ನಾಯಕರ ಮೇಲೆ ಗದಾಪ್ರಹಾರ ನಡೆಸುತ್ತಿದೆ,'' ಎಂದು ಅಸಮಾಧಾನ ವ್ಯಕ್ತಪಡಿಸಿದರು.

''ಬಿಜೆಪಿ ನಾಯಕರ ಇಂತಹ ವರ್ತನೆ ಮುಂದಿನ ದಿನಗಳಲ್ಲಿ ಅವರಿಗೆ ಮುಳ್ಳಾಗಿ ಪರಿಣಮಿಸುವುದು ಶತಸಿದ್ಧ. ಹಿಂದುತ್ವವನ್ನು ಪ್ರತಿಪಾದಿಸುವ ಬಿಜೆಪಿ ನಾಯಕರು, ಡಿ.ಕೆ.ಶಿವಕುಮಾರ್‌ ಅವರು ತಮ್ಮ ತಂದೆ ಹಾಗೂ ಹಿರಿಯರಿಗೆ ಎಡೆ ಇಡಲು ಅವಕಾಶ ನೀಡದೆ ಕಿರುಕುಳ ನೀಡಿದ್ದಾರೆ,'' ಎಂದು ದೂರಿದರು.

''ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡಿದಷ್ಟು ನಾವು ಪುಟಿದೇಳುತ್ತೇವೆ. ಚೆಂಡನ್ನು ಎಷ್ಟು ಜೋರಾಗಿ ಎಸೆದರೂ ಅಷ್ಟೇ ಜೋರಾಗಿ ವಾಪಸ್‌ ಬರುತ್ತದೆ. ಅದೇ ಮಾದರಿಯಲ್ಲಿ ಅವರು ಕಿರುಕುಳ ನೀಡಿದ್ದಕ್ಕೆ ಅನುಗುಣವಾಗಿ ರಾಜಕೀಯವಾಗಿ ಮತ್ತಷ್ಟು ಶಕ್ತಿಶಾಲಿಯಾಗಿ ಕಾಂಗ್ರೆಸ್‌ ಹೊರಹೊಮ್ಮಲಿದೆ,'' ಎಂದು ಅಭಿಪ್ರಾಯಪಟ್ಟರು.

------------

ಕಾನೂನು ಮೇಲೆ ಕಾಂಗ್ರೆಸ್‌ಗೆ ಗೌರವವಿಲ್ಲ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಬಂಧನದ ಬಳಿಕ ಕಾಂಗ್ರೆಸ್‌ ಮಾರುಕಟ್ಟೆಗೆ ಇಳಿದು ಕಲ್ಲುತೂರಾಟದಲ್ಲಿ ತೊಡಗಿದೆ. ದೇಶದ ಕಾನೂನು ಎಲ್ಲರಿಗೂ ಒಂದೇ. ಡಿ.ಕೆ.ಶಿವಕುಮಾರ್‌ ವಿರುದ್ಧ ಎರಡು ವರ್ಷದಿಂದ ತನಿಖೆ ನಡೆಯುತ್ತಿದೆ. ಸಂವಿಧಾನ, ಕಾನೂನು ಮೇಲೆ ಗೌರವ ಇರುವವರು ತನಿಖೆ ಎದುರಿಸುತ್ತಾರೆ. ಗೌರವ, ನಂಬಿಕೆ ಇಲ್ಲದವರು ಕಲ್ಲು ತೂರುತ್ತಾರೆ.
-ನಳಿನ್‌ ಕುಮಾರ್‌ ಕಟೀಲ್‌, ಬಿಜೆಪಿ ರಾಜ್ಯಾಧ್ಯಕ್ಷ (ಹಾಸನದಲ್ಲಿ ಹೇಳಿದ್ದು)

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ