ಆ್ಯಪ್ನಗರ

10,500 ಶಿಕ್ಷಕರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ: ಸುರೇಶ್ ಕುಮಾರ್

ಈಗಾಗಲೇ ಖಾಲಿಯಿರುವ ಶಾಲೆಗಳಲ್ಲಿ 10,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ . ಟಿಪ್ಪು ಪಠ್ಯವನ್ನು ಮುಂಬರುವ ಶೈಕ್ಷಣಿಕ ವರ್ಷದಲ್ಲಿ ತೆಗೆಯಲು ಸಾಧ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

Vijaya Karnataka Web 10 Feb 2020, 3:03 pm
ಮೈಸೂರು : ಈಗಾಗಲೇ ಖಾಲಿಯಿರುವ ಶಾಲೆಗಳಲ್ಲಿ 10,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
Vijaya Karnataka Web suresh kumar


ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಒಂದು ಪಟ್ಟಿ ಹಾಕಿದ್ದೇವೆ. ತಾಂತ್ರಿಕ ದೋಷದಿಂದ ಮತ್ತೊಂದು ಪಟ್ಟಿ ಹಾಕಲು ಆಗಿಲ್ಲ. ಶೀಘ್ರವೇ ಕ್ರಮವಹಿಸಲಾಗುವುದು. ಜೊತೆಗೆ ಟಿಪ್ಪು ವಿಷಯವನ್ನು ಈ ಶೈಕ್ಷಣಿಕ ವರ್ಷದಲ್ಲಿ ಪಠ್ಯದಿಂದ ಕೈ ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಇನ್ನು ಮುಂದೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಅದಕ್ಕೆ ವ್ಯವಸ್ಥೆ ಕೂಡ ಮಾಡುತ್ತಿದ್ದೇವೆ ಹಿಂದಿನಿಂದಲೂ ಪಠ್ಯ ಪುಸ್ತಕ ವಿತರಣೆಯಲ್ಲಿ ಸಾಕಷ್ಟು ವಿಳಂಬ ಆಗುತ್ತಿದೆ. ಹೀಗಾಗಿ, ಶಾಲಾ ಪ್ರಾರಂಭದ ದಿನವೇ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಿಸಲು ತೀರ್ಮಾನಿಸಿದ್ದೇವೆ. ಇದಕ್ಕಾಗಿ ವಿಸ್ತೃತ ಸಮಿತಿ ರಚಿಸುತ್ತೇವೆ. ನಮ್ಮ ಮಕ್ಕಳು ಸಮವಸ್ತ್ರ ಧರಿಸಿ, ಪಠ್ಯ ಪುಸ್ತಕ ತೆಗೆದುಕೊಂಡು ಖುಷಿಯಿಂದ ಶಾಲೆ ಹೋಗುವಂತಾಗಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ