ಆ್ಯಪ್ನಗರ

ಪತ್ರಕರ್ತ ಅಸ್ವಾಳ್‌ ಶಂಕರೇಗೌಡ ನಿಧನ

ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ತಾಲೂಕಿನ ಹಿರಿಯ ಪತ್ರಕರ್ತ ಅಸ್ವಾಳ್‌ ಶಂಕರೇಗೌಡ(52) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟರು.

Vijaya Karnataka 28 May 2019, 5:00 am
ಹುಣಸೂರು : ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ತಾಲೂಕಿನ ಹಿರಿಯ ಪತ್ರಕರ್ತ ಅಸ್ವಾಳ್‌ ಶಂಕರೇಗೌಡ(52) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟರು.
Vijaya Karnataka Web journalist shankare gowda died
ಪತ್ರಕರ್ತ ಅಸ್ವಾಳ್‌ ಶಂಕರೇಗೌಡ ನಿಧನ


20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಮೃತರಿಗೆ ಪತ್ನಿ ಮತ್ತು ಒಬ್ಬ ಪುತ್ರ, ಪುತ್ರಿ ಇದ್ದಾರೆ. ಸಂಜೆ ಸ್ವಗ್ರಾಮದ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮೇ 5ರಂದು ಹನಗೋಡಿನಲ್ಲಿ ಸಂಬಂಧಿಗಳ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬೈಕಿನಲ್ಲಿ ಹಿಂತಿರುಗುತ್ತಿದ್ದ ವೇಳೆ ತಟ್ಟೆಕೆರೆ ಬಳಿ ಆಟೋವೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟಾಗಿತ್ತು. ಕೂಡಲೇ ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವಾರದ ಹಿಂದೆ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ವರ್ಗಾಯಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟರು.

ಸಿಂಗರಮಾರನಹಳ್ಳಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾದ ಶಂಕರೇಗೌಡರು 5 ವರ್ಷಗಳಿಂದ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ ಅಸ್ವಾಳು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ರಾಜ್ಯ ರೈತಸಂಘದ ಹಿರಿಯ ಮುಖಂಡ ಬಡಗಲಪುರ ನಾಗೇಂದ್ರ, ಸಂಘದ ಜಿಲ್ಲಾ ಸಂಚಾಲಕ ಹೊಸೂರು ಕುಮಾರ್‌ ಆಸ್ಪತೆಗೆ ಭೇಟಿ ನೀಡಿ ಸಂತಾಪ ಸೂಚಿಸಿದರು. ಶಾಸಕ ಎಚ್‌.ವಿಶ್ವನಾಥ್‌, ಮಾಜಿ ಶಾಸಕ ಎಚ್‌.ಪಿ.ಮಂಜುನಾಥ್‌, ಜಿಲ್ಲಾ ಪಂಚಾಯಿತಿ ಸದಸ್ಯ ಅಮಿತ್‌ ದೇವರಹಟ್ಟಿ, ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು, ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು ಅಂತಿಮ ದರ್ಶನ ಪಡೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ