ಆ್ಯಪ್ನಗರ

ಮೈಸೂರಿನಲ್ಲಿ ಪ್ರತಿಭಟನಾ ರೈತರನ್ನು ಬಂಧಿಸಿದ ಪೊಲೀಸರು

ಕೃಷಿ ಮಸೂದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ವೇಳೆ ರೈತರನ್ನು ಬಂಧಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಆಗಿವೆ.

Vijaya Karnataka Web 28 Sep 2020, 1:24 pm
ಮೈಸೂರು : ಕೃಷಿ ಮಸೂದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಲವು ಸಂಘಟನೆಗಳನ್ನೊಳಗೊಂಡು ಮೈಸೂರಿನ ವಿವಿಧೆಡೆ ಪ್ರತಿಭಟನೆ ಕೈಗೊಂಡಿದ್ದ ಪ್ರತಿಭಟನಾಕಾರರನ್ನು ತಮ್ಮ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Vijaya Karnataka Web mysuru


ಇತ್ತ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ನಡೆಯುತ್ತಿದ್ದ ಸಾಂಕೇತಿಕ ಪ್ರತಿಭಟನೆ ಮುಕ್ತಾಯಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಕಡೆಗೆ ಬಸ್ ಸಂಚಾರ ಆರಂಭವಾಗುತ್ತಿದ್ದಂತೆ ಬಸ್ ಹತ್ತಲು ಪ್ರಯಾಣಿಕರು ಮುಗಿಬಿದ್ದರು. ಗ್ರಾಮಾಂತರ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟ ರೈತರನ್ನು ಪೊಲೀಸರು ತಡೆದರು. ಹೀಗಾಗಿ, ಪ್ರತಿಭಟನೆಯನ್ನ ಟೌನ್ ಹಾಲ್ ಬಳಿ ನಡೆಸಲು ರೈತರು ತೀರ್ಮಾನಿಸಿದರು. ಇದಾದ ನಂತರ ಕೋಟೆ ಆಂಜನೇಯ ಮುಂಭಾಗದಲ್ಲಿ ಕೂಡ ಪ್ರತಿಭಟನಾಕಾರರು ಪ್ರತಿಭಟನೆಯಲ್ಲಿ ತೊಡಗಿಸಿಕೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು ಮುಂಜಾಗೃತಾ ಕ್ರಮವಾಗಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಈ ನಡುವೆ ವಿವಿಧೆಡೆ ಸಂಚರಿಸುವ ಬಸ್ ಗಳ ಸುಗಮ ಬಸ್ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟರು. ಪ್ರಯಾಣಿಕರಿಗಾಗಿ ಚಾಲಕರು ಮತ್ತು ನಿರ್ವಾಹಕರು ಕಾದು ಕುಳಿತರು. 9.30ರ ಸುಮಾರಿಗೆ ಬಸ್ ಸಂಚಾರ ಆರಂಭವಾಯಿತು. ಈ ನಡುವೆ ಪ್ರಯಾಣಿಕರ ಸಂಖ್ಯೆಯಲ್ಲಿ ವಿರಳವಾಗಿತ್ತು.

ಕೃಷಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಿನಲ್ಲೂ ಪ್ರತಿಭಟನೆಯ ಕಿಡಿ

ಕೃಷಿ ಮಸೂದೆ ವಿರೋಧಿಸಿ ಎಪಿಎಂಸಿ ಸದಸ್ಯರು ಎಪಿಎಂಸಿ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದರು.
ಎಪಿಎಂಸಿ ಅಧ್ಯಕ್ಷ ಬಸವರಾಜು ನಡೆದ ಪ್ರತಿಭಟನೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿದರು. ಎಪಿಎಂಸಿ ಸುತ್ತಮುತ್ತ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಪಿಎಂಸಿ ಮಾರುಕಟ್ಟೆ ಜನರಿಲ್ಲದೆ ಬಿಕೋ ಎನ್ನುತ್ತಿದೆ. ತರಕಾರಿ,ದಿನಸಿ ಸರಬರಾಜು ಮಾಡುವ ಲಾರಿಗಳು ನಿಂತಲ್ಲೇ ನಿಂತಿದೆ.

ಮೈಸೂರಿನ ಜೆಎಸ್‌ಎಸ್‌ನಲ್ಲಿ ಮತ್ತೊಂದು ಕೋವಿಡ್‌ ಲಸಿಕೆ ಪ್ರಯೋಗ

ಬಂದ್ ಬಿಸಿ ಹಿನ್ನೆಲೆ ನಗರ ರೈಲ್ವೆ ನಿಲ್ದಾಣದಲ್ಲಿ ಬಿಗಿ ಭದ್ರತೆ ನೀಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಭದ್ರತೆ‌ ದೃಷ್ಟಿಯಿಂದ ರಿಸರ್ವೇಷನ್ ಇದ್ದರೆ ಮಾತ್ರ ಪ್ರವೇಶ ನೀಡಲಾಗಿದೆ. ಈ ನಡುವೆ ಕೇವಲ ಪ್ರತಿಭಟನೆಗೆ ರೈತರ ಹೋರಾಟ ಸೀಮಿತವಾದಂತೆ ಭಾಸವಾದಂತಿದೆ. ಓಲಾ, ಊಬರ್‌ ಹೊರತುಪಡಿಸಿ ಬಸ್‌, ಆಟೋ ಸಂಚಾರ ಎಂದಿನಂತೆ ನಡೆಯುತ್ತಿದೆ. ಅಲ್ಲದೇ ಹಣ್ಣಿನ ಮಾರುಕಟ್ಟೆಯಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದ್ದು, ಗ್ರಾಹಕರ ಸಂಖ್ಯೆ ವಿರಳವಾಗಿದೆ.

ತೆವಳುತ್ತಾ ಬಂದು ರೈತರ ಹೋರಾಟಕ್ಕೆ ಸಾಥ್ ನೀಡಿದ ವಿಕಲಚೇತನ ಯುವಕ

ಬಂದ್‌ ಹಿನ್ನೆಲೆ ಸೂಪರ್ ಮಾರ್ಕೆಟ್ ಸಂಪೂರ್ಣ ಮುಚ್ಚಲಾಗಿದೆ. ಸ್ವಯಂಪ್ರೇರಿತವಾಗಿ ಮಾಲ್‌ ಗಳನ್ನ ಮಾಲೀಕರು ಬಾಗಿಲು ಹಾಕಿದ್ದಾರೆ. ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರಿಲ್ಲದೆ ಬಸ್ ಸ್ಟ್ಯಾಂಡ್ ಭಣಗುಡುತ್ತಿದೆ. ಮೈಸೂರಿನಿಂದ ಚಾಮರಾಜನಗರ, ಕೊಳ್ಳೆಗಾಲ, ಗುಂಡ್ಲುಪೇಟೆ, ಮಹದೇಶ್ವರ ಬೆಟ್ಟ, ಮಳವಳ್ಳಿ ಸೇರಿದಂತೆ ಇತರೆ ಭಾಗಗಳಿಗೆ ಸಂಚರಿಸುತ್ತಿದ್ದ ಬಸ್ಸುಗಳು ನಿಂತಲ್ಲೇ ನಿಂತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ