ಆ್ಯಪ್ನಗರ

ಮಳೆ ಆರ್ಭಟಕ್ಕೆ ಕರ್ನಾಟಕ– ಕೇರಳ ರಸ್ತೆ ಸಂಚಾರ ಸಂಪೂರ್ಣ ಬಂದ್‌!

ಹಳೆ ಮೈಸೂರು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಕಬಿನಿ ಜಲಾನಯನ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನೀರು ಹರಿಯುತ್ತಿದ್ದು ಈ ಹಿನ್ನೆಲೆ ಕರ್ನಾಟಕ –ಕೇರಳ ರಸ್ತೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.

Vijaya Karnataka Web 8 Aug 2020, 8:01 pm
ಮೈಸೂರು: ಹಳೆ ಮೈಸೂರು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಕಬಿನಿ ಜಲಾನಯನ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನೀರು ಹರಿಯುತ್ತಿದ್ದು ಈ ಹಿನ್ನೆಲೆ ಕರ್ನಾಟಕ –ಕೇರಳ ರಸ್ತೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.
Vijaya Karnataka Web kerala road


ಒಂದೆಡೆ ರಾಜ್ಯದಲ್ಲಿ ಮಳೆಯಾಗುತ್ತಿದ್ದರೆ, ಮತ್ತೊಂದೆ ಕೇರಳದ ವೈನಾಡಿನಲ್ಲಿ ಭಾರೀ ಮಳೆಯಿಂದಾಗಿ ಹಲವು ಹಳ್ಳಗಳು ಉಕ್ಕಿ ಹರಿಯುತ್ತಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ತಾತ್ಕಾಲಿಕವಾಗಿ ಕರ್ನಾಟಕ-ಕೇರಳ ಸಂಚಾರವನ್ನು ಬಂದ್ ಮಾಡಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಕಳೆದ 24 ಗಂಟೆಗಳಿಂದ ಕರ್ನಾಟಕ-ಕೇರಳ ನಡುವಿನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಈ ನಡುವೆ ಕಬಿನಿ ಜಲಾಶಯದಿಂದ 75ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದ್ದು ಕಪಿಲೆ ಮೈದುಂಬಿ ಹರಿಯುತ್ತಿದ್ದಾಳೆ. ಇದರಿಂದ ರಾಷ್ಟ್ರೀಯ ಹೆದ್ದಾರಿಗೆ ಕಪಿಲಾ ನದಿ ನೀರು ನುಗ್ಗಿದೆ.

ಬಂಟ್ವಾಳದಲ್ಲಿ ಅಪಾಯದ ಮಟ್ಟ ಮೀರಿದ ನೇತ್ರಾವತಿ ನದಿ: ಅಪಾರ ಬೆಳೆ ನಷ್ಟ

ಕಪಿಲಾ ನದಿಗೆ 75 ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ಬಿಟ್ಟ ಪರಿಣಾಮ ಮೈಸೂರು ಊಟಿ ರಸ್ತೆಗೆ ಕಪಿಲಾ ನದಿ ನೀರು ನುಗ್ಗಿದ್ದು, ಹರಿಯುವ ನೀರಿನಲ್ಲೇ ವಾಹನಗಳು ಸಂಚರಿಸುತ್ತಿವೆ. ಇತ್ತ ನಂಜನಗೂಡಿನ ಮಲ್ಲನಮೂಲೆ ಮಠದ ಬಳಿಯ ಬಸವೇಶ್ವರ ದೇವಾಲಯ ಜಲಾವೃತವಾಗಿ ಮುಳುಗಿ ಹೋಗಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಪಶ್ಚಿಮಾಭಿಮುಖಿ ನದಿಗಳು: ಕರಾವಳಿಯಲ್ಲಿ ರೆಡ್‌ ಅಲರ್ಟ್‌!

ಇತ್ತ ಕೆ.ಆರ್.ಎಸ್ ಹಾಗೂ ಕಬಿನಿಯಿಂದ ಹೆಚ್ಚುವರಿ ನೀರು ಬಿಡುಗಡೆ ಹಿನ್ನಲೆ ತಿ.ನರಸೀಪುರ ತಾಲೂಕಿನಲ್ಲಿ ಪ್ರವಾಹದ ಭೀತಿ‌ ಎದುರಾಗಿದ್ದು ನದಿ ಪಾತ್ರದ ಜನತೆಯಲ್ಲಿ ಆತಂಕ ಮನೆ ಮಾಡಿದೆ. ತಿ.ನರಸೀಪುರ ಶ್ರೀ ಗುಂಜಾ ನರಸಿಂಹ ಸ್ವಾಮಿ ದೇವಾಲಯದ ಮೆಟ್ಟಿಲುಗಳು ಮುಳುಗಡೆಯಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ