ಆ್ಯಪ್ನಗರ

ಇಂದು ಮೈಸೂರಿಗೆ ಮಾಯಾವತಿ

ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ನಾಯಕಿ ಮಾಯಾವತಿ ಏ.10ರಂದು ಬುಧವಾರ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ.

Vijaya Karnataka 10 Apr 2019, 5:00 am
ಮೈಸೂರು: ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ನಾಯಕಿ ಮಾಯಾವತಿ ಏ.10ರಂದು ಬುಧವಾರ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ.
Vijaya Karnataka Web mayawati to mysore today
ಇಂದು ಮೈಸೂರಿಗೆ ಮಾಯಾವತಿ


ಮಾಯಾವತಿ ಅವರು ಮಂಗಳವಾರ ರಾತ್ರಿ ವಿಶೇಷ ವಿಮಾನದಲ್ಲಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ನಂತರ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದರು. ಬುಧವಾರ ಮಧ್ಯಾಹ್ನ 12.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕರ್ತರ ಬೃಹತ್‌ ಸಮಾವೇಶ ನಡೆಯಲಿದೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತ್ರ ಮಾಯಾವತಿ ಅವರು ಪ್ರಚಾರ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಿಎಸ್‌ಪಿ ಮುಖಂಡರು ಹಾಗೂ ಕಾರ್ಯಕರ್ತರು ಮೈಸೂರಿನ ಸಮಾವೇಶಕ್ಕೆ ಆಗಮಿಸಲಿದ್ದಾರೆ. ಸುಮಾರು 50 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಹಾಗೂ ಕೊಳ್ಳೇಗಾಲ ಶಾಸಕ ಮಹೇಶ್‌ ಅವರು 'ವಿಜಯ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.

''ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಡಾ.ಅಶೋಕ್‌ ಸಿದ್ದಾರ್ಥ, ಸತೀಶ್‌ ಚಂದ್ರ ಮಿಶ್ರಾ, ಉತ್ತರ ಪ್ರದೇಶದ ಮಾಜಿ ಎಂಎಲ್‌ಸಿ ಎಂ.ಎಲ್‌.ಥೋಮರ್‌, ಮಾಯಾವತಿ ಅವರ ಸಇಂದು ಮೈಸೂರಿಗೆ ಮಾಯಾವತಿಹೋದರನ ಪುತ್ರ ಆಕಾಶ್‌ ಆಗಮಿಸುತ್ತಿದ್ದಾರೆ,'' ಎಂದು ತಿಳಿಸಿದ್ದಾರೆ.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ವೇದಿಕೆ ನಿರ್ಮಾಣವಾಗಿದ್ದು, ಅಲ್ಲಿಯೇ ಬಿಎಸ್‌ಪಿಯ ಕಾರ್ಯಕ್ರಮವೂ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ