ಆ್ಯಪ್ನಗರ

‘ಮೀ ಟೂ’: ಸಂತ್ರಸ್ತೆಯರು ದೂರು ನೀಡಿದರೆ ಕ್ರಮ

ಫೆಸ್ಟಿವಲ್‌ನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಂತೆ ಸೂಕ್ತ ಬಂದೋಬಸ್ತ್‌ ಒದಗಿಸುವುದರೊಂದಿಗೆ ಸಿಸಿ ಟಿವಿ ಕ್ಯಾಮೆರಾ ಮತ್ತು ಡ್ರೋಣ್‌ ಮೂಲಕ ಇಡೀ ಕಾರ್ಯಕ್ರಮವನ್ನು ಚಿತ್ರಿಕರಿಸಲಾಗಿದೆ.

Vijaya Karnataka 16 Oct 2018, 9:49 am
ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಕೃಷ್ಣ ಬುಲೇವಾರ್ಡ್‌ ರಸ್ತೆಯಲ್ಲಿ ನಡೆದ ಓಪನ್‌ ಸ್ಟ್ರೀಟ್‌ ಫೆಸ್ಟಿವಲ್‌ನಲ್ಲಿ ಕಿರುಕುಳ ಅನುಭವಿಸಿದ ಯುವತಿಯರು ದೂರು ನೀಡಿದರೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ನಗರ ಪೊಲೀಸ್‌ ಆಯುಕ್ತ ಡಾ.ಎ.ಸುಬ್ರಮಣ್ಯೇಶ್ವರ ರಾವ್‌ ತಿಳಿಸಿದ್ದಾರೆ.
Vijaya Karnataka Web M Dasara


ಫೆಸ್ಟಿವಲ್‌ನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಂತೆ ಸೂಕ್ತ ಬಂದೋಬಸ್ತ್‌ ಒದಗಿಸುವುದರೊಂದಿಗೆ ಸಿಸಿ ಟಿವಿ ಕ್ಯಾಮೆರಾ ಮತ್ತು ಡ್ರೋಣ್‌ ಮೂಲಕ ಇಡೀ ಕಾರ್ಯಕ್ರಮವನ್ನು ಚಿತ್ರಿಕರಿಸಲಾಗಿದೆ. ಆದರೆ ಕಿರುಕುಳದ ಯಾವುದೇ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ದಾಖಲಾಗಿಲ್ಲ. ಈ ಹಿನ್ನೆಲೆಯಲ್ಲಿ ಸಂತ್ರಸ್ತರು ದೂರು ನೀಡಿದರೆ ಕ್ರಮ ಜರುಗಿಸುವುದಾಗಿ ಅವರು ಪತ್ರಿಕೆಗೆ ತಿಳಿಸಿದರು.

ಹೀಗಾಗಬಾರದಿತ್ತು: ಜಿಟಿಡಿ

'ಓಪನ್‌ ಸ್ಟ್ರೀಟ್‌ ಫೆಸ್ಟಿವಲ್‌' ವೇಳೆ ಕೆಲ ದುಷ್ಕರ್ಮಿಗಳು ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸಿದರೆಂಬ ದೂರು ಕೇಳಿ ಬಂದಿದೆ. ಮುಂದಿನ ಬಾರಿ ನಗರ ವಲಯ ವ್ಯಾಪ್ತಿಗೂ ಸ್ವಲ್ಪ ದೂರದಲ್ಲಿ ಫೆಸ್ಟಿವಲ್‌ ಮಾಡಲು ಕ್ರಮ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಮೈಸೂರು ದಸರಾ ಜಾನಪದ ಸಿರಿ ಕಾರ್ಯಕ್ರಮದಲ್ಲಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ