ಆ್ಯಪ್ನಗರ

ಅಂಬೇಡ್ಕರ್ ಗೂ ದಲಿತ ಸಮುದಾಯಕ್ಕೂ ತಾಯಿ-ಮಗುವಿನ ಸಂಬಂಧ: ಶ್ರೀನಿವಾಸ್ ಪ್ರಸಾದ್

ಸರ್ಕಾರದ ಗಮನಕ್ಕೆ ಬಾರದೆ ಶಿಕ್ಷಣ ಇಲಾಖೆ ಹೊರ ತಂದಿರುವ ಕೈಪಿಡಿಯಲ್ಲಿ ತಪ್ಪಾಗಿದೆ ಎಂದು ತಿಳಿದು ಬಂದಿದೆ. ಅಂಬೇಡ್ಕರ್ ರವರಿಗೂ ದಲಿತ ಸಮುದಾಯಕ್ಕೂ ತಾಯಿ - ಮಗುವಿನ ಸಂಬಂಧವಿದೆ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

Vijaya Karnataka Web 16 Nov 2019, 5:45 pm
ಮೈಸೂರು: ಅಂಬೇಡ್ಕರ್ ರವರಿಗೂ ದಲಿತ ಸಮುದಾಯಕ್ಕೂ ತಾಯಿ - ಮಗುವಿನ ಸಂಬಂಧವಿದೆ. ಸದ್ಯ ಶಿಕ್ಷಣ ಇಲಾಖೆಯ ಕೈಪಿಡಿಯಲ್ಲಿ ತಪ್ಪಾಗಿದೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
Vijaya Karnataka Web srinivasa prasad


'ಕಠಿಣ ಕ್ರಮ ಕಾನೂನು ಕ್ರಮ ಕೈಗೊಳ್ಳಿ'

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಶೋಷಣೆಗೆ ಒಳಗಾಗಿದ್ದ ದಲಿತ ಸಮುದಾಯಕ್ಕೆ ಅಂಬೇಡ್ಕರ್ ಆಶಾ ಕಿರಣವಾಗಿದ್ದಾರೆ. ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚನೆ ಮಾಡಿಲ್ಲಎಂಬುದು ಸ್ವತಃ ಬಿ. ಆರ್ ಅಂಬೇಡ್ಕರ್ ಅವರಿಗೂ ಗೊತ್ತಿತ್ತು. ಆದರೂ ಅಂಬೇಡ್ಕರ್ ಸಂವಿಧಾನ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಸಂವಿಧಾನ ರಚನೆ ಮಾಡಿದ್ದಾರೆ ಎಂದರು.

ಅಂಬೇಡ್ಕರ್‌ಗೆ ಅಗೌರವ ಖಂಡಿಸಿ ಹೆದ್ದಾರಿ ತಡೆ

ಸರ್ಕಾರದ ಗಮನಕ್ಕೆ ಬಾರದೆ ಶಿಕ್ಷಣ ಇಲಾಖೆ ಹೊರ ತಂದಿರುವ ಕೈಪಿಡಿಯಲ್ಲಿ ತಪ್ಪಾಗಿದೆ ಎಂದು ತಿಳಿದು ಬಂದಿದೆ. ಶಿಕ್ಷಣ ಸಚಿವರು ತಮ್ಮ ಗಮನಕ್ಕೆ ತರಬೇಕೆಂದು ಹೇಳಿದ್ದರೂ ಸಹ ಅಧಿಕಾರಿಗಳು ಸಚಿವರ ಗಮನಕ್ಕೆ ತರದೇ ಕೈಪಿಡಿಯನ್ನು ತಮ್ಮ ವೆಬ್ ಸೈಟ್ ಗೆ ಅಪ್ಲೋಡ್ ಮಾಡಿದ್ದಾರೆ. ಕರ್ತವ್ಯ ಲೋಪದಡಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಅಂಬೇಡ್ಕರ್ ಎಂದೊಡನೆ ನಾವು ಉದ್ವೇಗಕ್ಕೆ ಒಳಗಾಗುತ್ತೇವೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ