ಆ್ಯಪ್ನಗರ

ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ, ಆತನಿಗೆ ಸಂಸ್ಕೃತಿ ಇಲ್ಲ: ಶ್ರೀನಿವಾಸ ಪ್ರಸಾದ್‌ ವಾಗ್ದಾಳಿ

ಈಗಿನ ಬೆಳವಣಿಗೆಗಳನ್ನು ಗಮನಿಸುತ್ತಾ ಹೋದರೆ ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ. ಆತನಿಗೆ ನಾಗರಿಕತೆ, ಸಂಸ್ಕೃತಿ ಇಲ್ಲ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.]

Vijaya Karnataka Web 22 Dec 2020, 5:19 pm
ಮೈಸೂರು: ಸಿದ್ದರಾಮಯ್ಯನಿಗೆ ನಾಗರಿಕತೆ, ಸಂಸ್ಕೃತಿ ಇಲ್ಲ. ಆತನೊಬ್ಬ ದಪ್ಪ ಚರ್ಮದ ಮನುಷ್ಯ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್‌ ಪ್ರಸಾದ್‌ ನಡುವಿನ ವಾಕ್ಸಮರ ಮುಂದುವರೆದಿದೆ.
Vijaya Karnataka Web Srinivas Prasad and Siddaramaiah
ಶ್ರೀನಿವಾಸ್‌ ಪ್ರಸಾದ್‌ ಮತ್ತು ಸಿದ್ದರಾಮಯ್ಯ (ಸಂಗ್ರಹ ಚಿತ್ರ)


ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಮಾತಾಡಿಸುತ್ತಾನೆ. ಕೇಳಿದರೆ ಹಳ್ಳಿಯಿಂದ ಬಂದಿದ್ದೇನೆ ಎಂದು ಹೇಳುತ್ತಾನೆ. ನಿಮ್ಮಂತೆ ಹಳ್ಳಿಯಿಂದ ಸಾಕಷ್ಟು ಜನರು ಬಂದಿದ್ದಾರೆ. ಆದರೆ ಯಾರೂ ಕೂಡ ನಿಮ್ಮಂತೆ ಮಾತನಾಡುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದರು.

ಇನ್ನು, ನಮ್ಮವರೇ ಬೆನ್ನಿಗೆ ಚೂರಿ ಹಾಕಿದರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್‌ ಪ್ರಸಾದ್‌, ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್‌‌ಗೆ‌ ಯಾಕೆ ದೂರು ಕೊಡ್ತಿದ್ರು? ಎಂದು ತಿರುಗೇಟು ನೀಡಿದರು.

ಸಿದ್ದರಾಮಯ್ಯಗೆ ಸೋಲಿನ ಹತಾಶೆ: ಮೈಸೂರಲ್ಲಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಲೇವಡಿ

ಮುಖ್ಯಮಂತ್ರಿ ಸ್ಥಾನದಿಂದ ಇಳಿದ ಮೇಲೆ ನಿಮ್ಮ ನಾಯಕತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದೀರಾ? ಎಂದು ಪ್ರಶ್ನಿಸಿದ ಶ್ರೀನಿವಾಸ್‌ ಪ್ರಸಾದ್‌, ನೀವು ಇದ್ದರೆ ಕಾಂಗ್ರೆಸ್ ಪಕ್ಷ ನಾಶವಾಗಲಿದೆ ಎಂದು ನಿಮ್ಮ ಪಕ್ಷದವರೇ ನಿಮ್ಮ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಇದರಲ್ಲೇ ಗೊತ್ತಾಗುತ್ತೆ ನಿಮ್ಮ ನಾಯಕತ್ವದ ಗುಣ ಏನೆಂದು ಕಿಡಿಕಾರಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ತಾಯಿ ಪ್ರೀತಿ ಸಿಗಲಿಲ್ಲ: ಜಿಟಿ ದೇವೇಗೌಡ

ಇನ್ನು, ಸೋಮವಾರವೂ ಮಾಜಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದ ಚಾಮರಾಜನಗರ ಸಂಸದ, ಚಾಮುಂಡೇಶ್ವರಿ ಕ್ಷೇತ್ರದ ಸೋಲಿನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹತಾಶರಾಗಿ, ಸತ್ತ ಕೋಳಿಯಂತಾಗಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲುತ್ತಾರೆ ಎಂದು ನಾನು ನಂಜನಗೂಡು ಉಪ ಚುನಾವಣೆಯಲ್ಲಿ ಸೋತ ಮರುದಿನವೇ ಹೇಳಿದ್ದೆ. ಈಗ ಅವರಿಗೆ ಸೋಲಿನ ಕಹಿ ಅರ್ಥವಾಗಿದೆ ಎಂದು ಹೇಳಿದ್ದರು.

ಯಡಿಯೂರಪ್ಪ ಅವರ ಸ್ಥಿತಿ ಮುಳ್ಳಿನ ಮೇಲಿನ ಬಟ್ಟೆಯಂತೆ, ಹುಷಾರಾಗಿರಲಿ: ಶ್ರೀನಿವಾಸ್‌ ಪ್ರಸಾದ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ