ಆ್ಯಪ್ನಗರ

ನನ್ನ ಸೋಲಿಗೆ ಸ್ಥಳೀಯ ಮುಖಂಡರಷ್ಟೇ ಕಾರಣ, ವಿಪರೀತಾರ್ಥ ಕಲ್ಪಿಸುವುದು ಬೇಡ - ಸಿದ್ದರಾಮಯ್ಯ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಇಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಎಂದು ನಾನು ಹೇಳಿದ್ದೇನೆಯೇ ಹೊರತು ರಾಜ್ಯ ಮಟ್ಟದ ನಾಯಕರೆಂದು ಹೇಳಿಲ್ಲ. ವಿಪರೀತಾರ್ಥ ಕಲ್ಪಿಸುವುದು ಬೇಡ ಎಂದು ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

Vijaya Karnataka 19 Dec 2020, 8:52 pm
ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಮ್ಮ ಪಕ್ಷದವರೇ ನನ್ನನ್ನು ಸೋಲಿಸಿದರು ಎಂದು ಹೇಳುವ ಮೂಲಕ ಪಕ್ಷದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿರುವ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಈಗ ಸೋಲಿಗೆ ಸ್ಥಳೀಯ ಮುಖಂಡರು ಮಾತ್ರ ಕಾರಣ ಎಂದು ಹೇಳಿ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ.
Vijaya Karnataka Web Siddaramaiah
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)


ಮೈಸೂರು ನಗರದ ಶಾರದಾದೇವಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, "ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿದ್ದೇನೆಯೇ ಹೊರತು ರಾಜ್ಯ ಮಟ್ಟದ ನಾಯಕರೆಂದು ಹೇಳಿಲ್ಲ. ವಿಪರೀತಾರ್ಥ ಕಲ್ಪಿಸುವುದು ಬೇಡ. ಇದು ಚಾಮುಂಡೇಶ್ವರಿ ಕ್ಷೇತ್ರದ ವಿಚಾರ. ನಾನು ಯಾರ ಹೆಸರನ್ನೂ ಪ್ರಸ್ತಾಪಿಸಿಲ್ಲ," ಎಂದು ಸ್ಪಷ್ಟನೆ ನೀಡಿದರಲ್ಲದೇ ನಮ್ಮ ಪಕ್ಷ ದವರೇ ನನ್ನನ್ನು ಸೋಲಿಸಿದರು ಎಂದು ಈ ಮೊದಲು ಹೇಳಿದ್ದನ್ನೇ ಸಮರ್ಥಿಸಿಕೊಂಡರು.

ಎಚ್‌. ಡಿ. ಕುಮಾರಸ್ವಾಮಿಗೆ ಮನೆ ಬಿಟ್ಟುಕೊಟ್ಟಿಲ್ಲ ಎಂಬುದು ಸುಳ್ಳು ಆರೋಪ: ಸಿದ್ದರಾಮಯ್ಯ
ಒಳ ಒಪ್ಪಂದ

"
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಒಪ್ಪಂದದ ಜನಕ" ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಟೀಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ. "ನಾನಲ್ಲ, ಬಿಜೆಪಿ ಮತ್ತು ಜೆಡಿಎಸ್‌ನವರೇ 29 ಕ್ಷೇತ್ರಗಳಲ್ಲಿ ಒಳ ಒಪ್ಪಂದ ಮಾಡಿಕೊಂಡಿದ್ದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ವಿರುದ್ಧ ಸ್ಪರ್ಧಿಸಲು ಬಿಜೆಪಿಯಿಂದ ಗೋಪಾಲಯ್ಯನಿಗೆ ಟಿಕೆಟ್‌ ನೀಡುವಂತೆ ಮಾಡಿದವರು ಯಾರು?" ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯಗೆ ನಾಲಗೆ ಮೇಲೆ ಹಿಡಿತವಿರಲಿ: ಮಾಜಿ ಸಿಎಂ ಕಾಲೆಳೆದ ಸಾ. ರಾ. ಮಹೇಶ್!
ಮೃದು ಧೋರಣೆ

"
ಬಿಜೆಪಿ ಬಗ್ಗೆ ಜೆಡಿಎಸ್‌ ಬರೀ ಮೃದು ಧೋರಣೆಯಲ್ಲ. ಮೇಲ್ಮನೆಯಲ್ಲಿಅವರ ಬೆಂಬಲಕ್ಕೆ ನಿಂತದ್ದು ಕಾಣಲಿಲ್ಲವೇ?" ಎಂದು ಸಿದ್ದರಾಮಯ್ಯ ಇದೇ ವೇಳೆ ಪ್ರಶ್ನಿಸಿದರು.

"ಬಿಜೆಪಿ ಜತೆ ಜೆಡಿಎಸ್‌ ವಿಲೀನ ಆಗುತ್ತೋ ಇಲ್ವೋ ನನಗೆ ಗೊತ್ತಿಲ್ಲ. ಆದರೆ ನಾನು ಜೆಡಿಎಸ್‌ನಲ್ಲಿದ್ದಾಗ 59 ಸ್ಥಾನ ಗೆದ್ದಿದ್ದು ಗೊತ್ತಿದೆಯಲ್ವಾ?" ಎಂದು ಹೇಳಿದರು.

ಹೋಟೆಲ್‌ನಲ್ಲಿ ರೂಂ ಮಾಡಿಕೊಂಡಿದ್ದ

"ಮುಖ್ಯಮಂತ್ರಿ ಆದ ಮೇಲೆ ಕುಮಾರಸ್ವಾಮಿ ತಾಜ್‌ ವೆಸ್ಟೆಂಡ್‌ಗೆ ಹೋಗಿದ್ದಲ್ಲ. ಅದಕ್ಕಿಂತ ಮುಂಚೆನೇ ಅಲ್ಲಿ ರೂಂ ಮಾಡಿಕೊಂಡಿದ್ದರು. ನಾನು ಮನೆ ಬಿಟ್ಟಿಲ್ಲ ಎಂಬುದೆಲ್ಲಾ ಸುಳ್ಳು. ನಾನು ಅವರ ಬಗ್ಗೆ ಎಲ್ಲ ಮಾತನಾಡಲ್ಲ. ಕುಮಾರಸ್ವಾಮಿ ಹೋಟೆಲ್‌ನಲ್ಲಿ ಉಳಿದಿದ್ದು ನಿಜವೋ ಇಲ್ಲವೋ? ಅದು ನಿಜವಾದ ಮೇಲೆ ಅದರ ಮೇಲೆ ಚರ್ಚೆ ಮಾಡುವುದು ಏನೂ ಇಲ್ಲ," ಎಂದು ಶಾಸಕ ಸಾ.ರಾ. ಮಹೇಶ್‌ ಮಾಡಿದ ಆರೋಪಕ್ಕೆ ತಿರುಗೇಟು ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ